Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:37 - ಕನ್ನಡ ಸತ್ಯವೇದವು J.V. (BSI)

37 ಆ ಧರ್ಮೋಪದೇಶಕನು - ಅವನಿಗೆ ದಯತೋರಿಸಿದವನೇ ಅಂದನು. ಆಗ ಯೇಸು ಅವನಿಗೆ - ಹೋಗು, ನೀನೂ ಅದರಂತೆ ಮಾಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೆ ಅವನು, “ದಯೆತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು. ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ ಹಾಗೆಯೇ ಮಾಡು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅದಕ್ಕೆ ನಿಯಮ ಪಂಡಿತನು, “ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ನಿನ್ನ ನೆರೆಯವನು,” ಎಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆಯೇ ಮಾಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಖಾಯ್ದೆ ಶಿಕ್ವುತಲ್ಯಾನ್ “ಜೆ ಕೊನ್ ತೆಚಿ ಉಳ್ಗಿ ಕರ್‍ಲ್ಯಾನ್ ತೊ”, ಮನುನ್ ಜಬಾಬ್ ದಿಲ್ಯಾನ್. ತನ್ನಾ ಜೆಜುನ್ ತೆಕಾ “ತಸೆ ಜಾಲ್ಯಾರ್, ಜಾ, ಅನಿ ತಿಯಾಬಿ ತಸೆಚ್ ಕರ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:37
18 ತಿಳಿವುಗಳ ಹೋಲಿಕೆ  

ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು ಎಂದು ಕೇಳಿದ್ದಕ್ಕೆ


ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು