Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:19 - ಕನ್ನಡ ಸತ್ಯವೇದವು J.V. (BSI)

19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾಗಿದ್ದರೆ, ನಿಮ್ಮ ಜನರು ದೆವ್ವಗಳನ್ನು ಯಾವ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನು ತಪ್ಪಿತಸ್ಥರೆಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜರ್ ಮಿಯಾ ಬೆಎಲ್ಜೆಬುಲಾಚ್ಯಾ ತಾಕ್ತಿನ್ ಗಿರೆ ಸೊಡ್ಸುತಾ ಹೊಲ್ಯಾರ್, ತುಮ್ಚೆ ವಾಂಗ್ಡಿ ಕಸ್ಲ್ಯಾ ತಾಕ್ತಿನ್ ಗಿರೆ ಕಾಡ್ತ್ಯಾತ್. ತುಮ್ಚೆ ವಾಂಗ್ಡಿಚ್ ತುಮಿ ಚುಕ್ ಕರುಕ್ ಲಾಗ್ಲ್ಯಾಶಿ ಮನುನ್ ದಾಕ್ವುನ್ ದಿತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:19
10 ತಿಳಿವುಗಳ ಹೋಲಿಕೆ  

ಅದಕ್ಕೆ ಯೋಹಾನನು - ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು ಅನ್ನಲು


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಬಾಯೇ, ನಿನ್ನ ತುಟಿಗಳು ಕೂಡಾ ನಿನಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.


ದೆವ್ವಬಿಡಿಸುವವರೆನಿಸಿಕೊಂಡು ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದೆವ್ವಹಿಡಿದವರ ಮೇಲೆ - ಪೌಲನು ಸಾರುವ ಯೇಸುವಿನ ಆಣೆ ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವದಕ್ಕೆ ತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು