Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:29 - ಕನ್ನಡ ಸತ್ಯವೇದವು J.V. (BSI)

29 ಜನರು ಗುಂಪುಗುಂಪಾಗಿ ಕೂಡಿಬರುತ್ತಿರುವಾಗ ಆತನು ಹೇಳುವದಕ್ಕೆ ತೊಡಗಿದ್ದೇನಂದರೆ - ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಜನರ ಗುಂಪು ದೊಡ್ಡದಾಗುತ್ತಿರಲು ಯೇಸು ಅವರಿಗೆ, “ಈ ಸಂತತಿಯು ಕೆಟ್ಟ ಸಂತತಿಯೇ ಸರಿ! ಇದು ಸೂಚಕಕಾರ್ಯವನ್ನು ನೋಡಬೇಕೆನ್ನುತ್ತದೆ. ಆದರೆ ಯೋನನ ಜೀವಿತದಲ್ಲಾದ ಸೂಚಕಕಾರ್ಯದ ಹೊರತು ಬೇರೆ ಯಾವುದೂ ಇದಕ್ಕೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಜನರು ಗುಂಪುಗುಂಪಾಗಿ ಕೂಡಿಬಂದಿದ್ದಾಗ, ಯೇಸು, “ಇದು ದುಷ್ಟ ಸಂತತಿಯು. ಇದು ಸೂಚಕಕಾರ್ಯವನ್ನು ಹುಡುಕುತ್ತದೆ, ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಲೊಕಾ ಜೆಜುಚ್ಯಾ ಭೊತ್ಯಾನಿ ಯೆವ್ನ್-ಯೆವ್ನ್ ಗೊಳಾ ಹೊತಾನಾ, ಜೆಜುನ್ “ಹ್ಯಾ ಕಾಲಾತ್ಲಿ ಲೊಕಾ ಕವ್ಡಿ ವಾಯ್ಟ್! ತೆನಿ ವಿಚಿತ್ರ್ ಕಾಮ್ ಇಚಾರ್‍ತ್ಯಾತ್. ಖರೆ ಜೊನಾ ಪ್ರವಾದ್ಯಾಚ್ಯಾ ಜಿವನಾತ್ ಹೊಲ್ಲ್ಯಾ ವಿಚಿತ್ರ್ ಕಾಮಾಚ್ಯಾನ್ಕಿ, ಅನಿ ದುಸ್ರೆ ವಿಚಿತ್ರ್ ಕಾಮ್ ಹೆಂಕಾ ಕರುನ್ ದಾಕ್ವುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:29
19 ತಿಳಿವುಗಳ ಹೋಲಿಕೆ  

ಬೇರೆ ಕೆಲವರು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕು ಎಂದು ಕೇಳಿದರು.


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಅವರು ಆತನನ್ನು - ಹಾಗಾದರೆ ನಾವು ನೋಡಿ ನಿನ್ನ ಮಾತನ್ನು ನಂಬುವಂತೆ ಏನು ಸೂಚಕಕಾರ್ಯ ಮಾಡುತ್ತೀ?


ಯೆಹೂದ್ಯರು ಆತನನ್ನು - ನಿನಗೆ ಇದನ್ನೆಲ್ಲಾ ಮಾಡುವ ಅಧಿಕಾರ ಉಂಟೆಂಬದಕ್ಕೆ ಏನು ಸೂಚಕ ಕಾರ್ಯವನ್ನು ತೋರಿಸುತ್ತೀ? ಎಂದು ಕೇಳಿದ್ದಕ್ಕೆ


ಹೀಗೆ ಲೋಕಾದಿಯಿಂದ ಹೇಬೆಲನ ರಕ್ತವು ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಹತವಾದ ಜಕರೀಯನ ರಕ್ತದವರೆಗೂ ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಈ ಸಂತತಿಯವರು ಉತ್ತರಕೊಡಬೇಕು ಎಂಬದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಹೇಳುತ್ತೇನೆ.


ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ? ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


[ಯೆಹೋವನ ಈ ಮಾತನ್ನು ಕೇಳಿರಿ -] ಈ ವಿಷಯದಲ್ಲಿ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು, ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಯೆಹೋವನು ಅವಿುತ್ತೈಯ ಮಗನಾದ ಯೋನನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು