ಲೂಕ 11:32 - ಕನ್ನಡ ಸತ್ಯವೇದವು J.V. (BSI)32 ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ನ್ಯಾಯತೀರ್ಪಿನ ದಿನದಲ್ಲಿ ನಿನೆವೆ ಪಟ್ಟಣದವರು ಈ ಸಂತತಿಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ತೋರಿಸುವರು. ಏಕೆಂದರೆ ಅವರು ಪ್ರವಾದಿಯಾದ ಯೋನನ ಬೋಧನೆಯನ್ನು ಕೇಳಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ನಾನು ಪ್ರವಾದಿ ಯೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಝಡ್ತಿಚ್ಯಾ ದಿಸಿ, ನಿನಿವೆಚಿ ಲೊಕಾ ಇಬೆ ರ್‍ಹಾವ್ನ್ ತುಮ್ಚಿ ಚುಕಾ ದಾಕ್ವುನ್ ದಿತ್ಯಾತ್. ಕಶ್ಯಾಕ್ ಮಟ್ಲ್ಯಾರ್, ಜೊನಾ ಪ್ರವಾದ್ಯಾನ್ ಸಾಂಗಲ್ಲೆ ಆಯ್ಕಲ್ಲೆಚ್, ತೆನಿ ದೆವಾಕ್ಡೆ ಫಾಟಿ ಪರತ್ಲ್ಯಾನಿ; ಅನಿ ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಹಿತ್ತೆ ಜೊನಾ ಪ್ರವಾದ್ಯಾಚ್ಯಾನ್ಕಿ ಮೊಟೊ ಹಿತ್ತೆ ಹಾಯ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |