ಲೂಕ 11:42 - ಕನ್ನಡ ಸತ್ಯವೇದವು J.V. (BSI)42 ಅಯ್ಯೋ ಫರಿಸಾಯರೇ, ನೀವು ಮರುಗ ಸದಾಪು ಮುಂತಾದ ಸಕಲ ಪಲ್ಯಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಒತ್ತಟ್ಟಿಗೆ ಬಿಟ್ಟಿದ್ದೀರಿ; ಇವುಗಳನ್ನು ಮಾಡಬೇಕಾಗಿತ್ತು, ಅವುಗಳನ್ನೂ ಬಿಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 “ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 “ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಫಾರಿಜೆವಾನೊ ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ತುಮಿ ಧಾ ತ್ಲೊ ಎಕ್ ವಾಟೊ ಮಟ್ಲ್ಯಾರ್, ಪುದಿನಾ, ಅನಿ ಅಸ್ಲ್ಯಾ ತಸ್ಲ್ಯಾ ಬಾರಿ-ಬಾರಿಕ್ಲ್ಯಾ ಝಾಡಾಂಚ್ಯಾ ಪಿಕಾತ್ಲೊ ಸೈತ್ ವಾಟೊ ದೆವಾಕ್ ದಿತ್ಯಾಶಿ, ಖರೆ, ದುಸ್ರ್ಯಾಕ್ನಿ ಬರೆ ಕರ್‍ತಲ್ಯಾಕ್, ಅನಿ ದೆವಾಚೊ ಪ್ರೆಮ್ ಕರ್‍ತಲ್ಯಾಕ್, ತುಮಿ ತುಮ್ಚೆ ಧ್ಯಾನುಚ್ ದಿ ನಾ ಹೊಲ್ಯಾಶಿ. ದುಸ್ರ್ಯಾಕ್ನಿ ಬರೆ ಕರುಂಗೆತ್ ತುಮಿ, ಹೆ, ಅದ್ದಿ ಕರಾ. ಅಧ್ಯಾಯವನ್ನು ನೋಡಿ |