Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:5 - ಕನ್ನಡ ಸತ್ಯವೇದವು J.V. (BSI)

5 ಮತ್ತು ಅವರಿಗೆ ಹೇಳಿದ್ದೇನಂದರೆ - ನಿಮ್ಮಲ್ಲಿ ಒಬ್ಬನಿಗೆ ಸ್ನೇಹಿತನಿದ್ದಾನೆ ಎಂದು ಹೇಳೋಣ. ಅವನು ಸರುಹೊತ್ತಿನಲ್ಲಿ ಆ ಸ್ನೇಹಿತನ ಬಳಿಗೆ ಹೋಗಿ - ಸ್ನೇಹಿತನೇ, ನನಗೆ ಮೂರು ರೊಟ್ಟಿಗಳನ್ನು ಕಡವಾಗಿ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪುನಃ ಯೇಸುಸ್ವಾಮಿ ಶಿಷ್ಯರಿಗೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, ‘ಗೆಳೆಯಾ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5-6 ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನೊಬ್ಬನ ಮನೆಗೆ ರಾತ್ರಿ ಬಹಳ ತಡವಾಗಿ ಹೋಗಿದ್ದಾನೆ ಎಂದು ಭಾವಿಸಿಕೊಳ್ಳೋಣ. ಅವನು ತನ್ನ ಸ್ನೇಹಿತನಿಗೆ, ‘ನನ್ನ ಗೆಳೆಯನೊಬ್ಬನು ನನ್ನನ್ನು ನೋಡಲು ದೂರದಿಂದ ನಮ್ಮ ಮನೆಗೆ ಬಂದಿದ್ದಾನೆ. ಆದರೆ ಅವನಿಗೆ ಊಟಕ್ಕೆ ಕೊಡಲು ನನಲ್ಲಿ ಏನೂ ಇಲ್ಲ. ದಯಮಾಡಿ ನನಗೆ ಮೂರು ರೊಟ್ಟಿಗಳನ್ನು ಕೊಡು’ ಎಂದು ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ, ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ, ‘ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಸಾಲವಾಗಿ ಕೊಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಜೆಜುನ್ ಶಿಸಾಕ್ನಿ “ಜರ್ ತುಮ್ಚ್ಯಾ ಮದ್ಲೊ ಎಕ್ಲೊ ಅರ್ದ್ಯಾ ರಾತ್ತಿಕ್ ಎಕ್ ದೊಸ್ತಾಚ್ಯಾ ಘರಾಕ್ ಜಾತಾ ಅನಿ ದೊಸ್ತಾ? ಮಾಕಾ ತಿನ್ ಭಾಕ್ರಿಯಾ ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:5
3 ತಿಳಿವುಗಳ ಹೋಲಿಕೆ  

ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷವಿುಸುತ್ತೇವಾದ್ದರಿಂದ ನಮ್ಮ ಪಾಪಗಳನ್ನು ಕ್ಷವಿುಸು. ನಮ್ಮನ್ನು ಶೋಧನೆಯೊಳಗೆ ಸೇರಿಸಬೇಡ ಎಂದು ಹೇಳಿರಿ ಅಂದನು.


ನನ್ನ ಸ್ನೇಹಿತರಲ್ಲಿ ಒಬ್ಬನು ಎಲ್ಲಿಗೋ ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಊಟಮಾಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು