ಲೂಕ 11:50 - ಕನ್ನಡ ಸತ್ಯವೇದವು J.V. (BSI)50-51 ಹೀಗೆ ಲೋಕಾದಿಯಿಂದ ಹೇಬೆಲನ ರಕ್ತವು ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಹತವಾದ ಜಕರೀಯನ ರಕ್ತದವರೆಗೂ ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಈ ಸಂತತಿಯವರು ಉತ್ತರಕೊಡಬೇಕು ಎಂಬದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950-51 ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50-51 ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 “ಆದ್ದರಿಂದ ಲೋಕಾದಿಯಿಂದ ಹತರಾದ ಎಲ್ಲಾ ಪ್ರವಾದಿಗಳ ಸಾವಿಗೆ ಈ ಕಾಲದ ಜನರಾದ ನೀವು ದಂಡನೆ ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಲೆಕ್ಕ ಕೊಡಬೇಕಾಗಿರುವುದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ತೆಚೆಸಾಟ್ನಿ ಜಗ್ ರಚಲ್ಲ್ಯಾಕ್ನಾ ಆಜ್ ಪತರ್ ಪ್ರವಾದ್ಯಾಕ್ನಿ ಜಿವಾನಿ ಮಾರಲ್ಲ್ಯಾಚಿ ಶಿಕ್ಷಾ ಹ್ಯಾ ಕಾಲಾಚ್ಯಾ ಲೊಕಾಕ್ನಿ ಗಾವ್ತಾ. ಅಧ್ಯಾಯವನ್ನು ನೋಡಿ |