Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:26 - ಕನ್ನಡ ಸತ್ಯವೇದವು J.V. (BSI)

26 ಆದದರಿಂದ ಕೇವಲ ಅಲ್ಪವಾದದ್ದನ್ನಾದರೂ ಮಾಡುವದಕ್ಕೆ ನೀವು ಅಶಕ್ತರಾಗಿರಲಾಗಿ ವಿುಕ್ಕಾದದ್ದರ ವಿಷಯದಲ್ಲಿ ಚಿಂತೆಮಾಡುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಂಥ ಅಲ್ಪಕಾರ್ಯಗಳನ್ನು ಮಾಡಲು ನೀವು ಅಶಕ್ತರಾಗಿ ಇರುವಾಗ, ಮಿಕ್ಕವುಗಳನ್ನು ಕುರಿತು ಚಿಂತಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಚಿಕ್ಕಕಾರ್ಯಗಳನ್ನೇ ಮಾಡಲು ನಿಮಗೆ ಸಾಧ್ಯವಿಲ್ಲದಿರುವಾಗ, ದೊಡ್ಡಕಾರ್ಯಗಳ ಕುರಿತು ನೀವು ಚಿಂತಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅತ್ಯಲ್ಪವಾಗಿರುವುದನ್ನು ನೀವು ಮಾಡಲಾರದವರಾಗಿದ್ದರೆ, ಇತರ ವಿಷಯಗಳಿಗಾಗಿ ನೀವು ಚಿಂತೆ ಮಾಡುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜರ್ ಎವ್ಡೆ ಬಾರಿಕ್ ಕಾಮ್ ತುಮ್ಚ್ಯಾ ಹಾತಿನ್ ಕರುಕ್ ಹೊಯ್ನಾ, ತರ್ ದುಸ್ರ್ಯಾ ಸಗ್ಳ್ಯಾಚ್ಯಾ ವಿಶಯಾತ್ ತುಮಿ ಕಶ್ಯಾಕ್ ಯವಜ್ತ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:26
7 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವದಕ್ಕೆ ಯಾರಿಂದಾದೀತು?


ಏನು ಊಟಮಾಡಬೇಕು? ಏನು ಕುಡಿಯಬೇಕು ಎಂದು ತವಕಪಡಬೇಡಿರಿ ಮತ್ತು ಅನುಮಾನ ಪಡಬೇಡಿರಿ.


ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ.


ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?


ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಯೋಚಿಸಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ; ಆದರೂ ಈ ಹೂವುಗಳೊಳಗೆ ಒಂದಕ್ಕಿರುವಷ್ಟು ಅಲಂಕಾರವು ಅರಸನಾದ ಸೊಲೊಮೋನನಿಗೆ ಸಹ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು