Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:28 - ಕನ್ನಡ ಸತ್ಯವೇದವು J.V. (BSI)

28 ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ದೆವ್ ತ್ಯಾ ಫುಲ್ಲಾಕ್ನಿ ನೆಸ್ವುತಾ. ಆಜ್ ರ್‍ಹಾವ್ನ್ ಉದ್ದ್ಯಾ ಚುಲಿತ್ ಜಳುನ್ ಜಾತಲ್ಯಾ ಡಂಗ್ಳಿತ್ಲ್ಯಾ ಗವ್ತಾಕ್, ದೆವ್, ಅಶೆ ಎವ್ಡೆ ಬರೆ ಕರುನ್ ನೆಸ್ವುತಾ! ತರ್ ತುಮ್ಕಾ ಕವ್ಡೆ ಬರೆ ಕರ್‍ತಾ ಅಸಿಲ್? ಕವ್ಡೊ ಕಮಿ ವಿಶ್ವಾಸ್ ತುಮ್ಚೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:28
10 ತಿಳಿವುಗಳ ಹೋಲಿಕೆ  

ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.


ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -


ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ.


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರಾದರೋ ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಅತ್ಯಾಶ್ಚರ್ಯಪಟ್ಟರು.


ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.


ಯೇಸು ಅದನ್ನು ತಿಳಿದು - ಅಲ್ಪವಿಶ್ವಾಸಿಗಳೇ, ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಮಾತಾಡಿಕೊಳ್ಳುವದೇಕೆ?


ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.


ಆಹಾ, ವಾಣಿಯು ಮತ್ತೆ ಕೇಳಿಸಿ - ಕೂಗು ಎನ್ನುತ್ತದೆ. ಅದಕ್ಕೆ ನಾನು - ಏನು ಕೂಗಲಿ ಎಂದು ಕೇಳಲು ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.


ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು