Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:31 - ಕನ್ನಡ ಸತ್ಯವೇದವು J.V. (BSI)

31 ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ; ಇದರ ಕೂಡ ಅವೂ ನಿಮಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನೀವಾದರೋ ದೇವರ ಸಾಮ್ರಾಜ್ಯಕ್ಕಾಗಿ ತವಕಪಡಿರಿ. ಇದರ ಸಮೇತ ಅವು ಕೂಡ ನಿಮಗೆ ಕೊಡಲಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನೀವು ದೇವರ ರಾಜ್ಯಕ್ಕೆ ಮೊದಲನೆ ಪ್ರಾಧಾನ್ಯತೆಯನ್ನು ಕೊಡಿರಿ. ಆಗ ನಿಮಗೆ ಬೇಕಾಗಿರುವ ಉಳಿದವುಗಳನ್ನು ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ, ಆಗ ಇವೆಲ್ಲವನ್ನು ದೇವರು ನಿಮಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ತುಮಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಯವ್ಜಾ, ಅನಿ ಹೆಚ್ಯಾ ವಾಂಗ್ಡಾ ದೆವ್ ತುಮ್ಕಾ ಸಗ್ಳೆಬಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:31
14 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವದಿಲ್ಲ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವದನ್ನಾಗಲಿ ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವದನ್ನಾಗಲಿ ನೋಡಲಿಲ್ಲ.


ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ.


ಅವರಿಗೆ ವಿಪತ್ಕಾಲದಲ್ಲಿಯೂ ಆಶಾಭಂಗವಾಗುವದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿಲ್ಲ.


ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.


ಇವೆಲ್ಲವುಗಳ ಮೇಲೆ ಇಹಲೋಕದ ಜನಗಳು ತವಕಪಡುತ್ತಾರೆ; ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು