ಲೂಕ 12:36 - ಕನ್ನಡ ಸತ್ಯವೇದವು J.V. (BSI)36 ನೀವಂತೂ ತಮ್ಮ ಯಜಮಾನನು ಬಂದು ತಟ್ಟಿದ ಕೂಡಲೆ ಕದವನ್ನು ತೆರೆಯುವದಕ್ಕೆ ಸಿದ್ಧವಾಗಿದ್ದು ಮದುವೇ ಊಟವನ್ನು ಯಾವಾಗ ತೀರಿಸಿಕೊಂಡು ಬರುವನೋ ಎಂದು ಅವನನ್ನು ಎದುರುನೋಡುತ್ತಿರುವ ಮನುಷ್ಯರಂತಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಮದುವೆಯ ಔತಣದಿಂದ ಮನೆಗೆ ಮರಳಿಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ನೀವಂತೂ ಮದುವೆಯ ಔತಣದಿಂದ ಹಿಂದಿರುಗುವ ತಮ್ಮ ಯಜಮಾನನಿಗಾಗಿ ಕಾಯುತ್ತಿದ್ದು, ಅವನು ಬಂದು ಬಾಗಿಲನ್ನು ತಟ್ಟಿದ ತಕ್ಷಣವೇ ಅವನಿಗಾಗಿ ತೆರೆಯುವ ಸೇವಕರಂತೆ ಇರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 “ಲಗ್ನಾಕ್ ಗೆಲ್ಲ್ಯಾ ಅಪ್ನಾಚ್ಯಾ ಮಾಲ್ಕಾಚಿ ವಾಟ್ ರಾಕುನ್ಗೆತ್ ರ್‍ಹಾತಲ್ಯಾ ಆಳಾ ಸರ್ಕೆ, ರಾಕುನ್ಗೆತ್ ರ್‍ಹಾವಾ. ಧನಿನ್ ಯೆವ್ನ್ ದಾರ್ ಬಡ್ವಲ್ಲ್ಯಾ ತನ್ನಾ, ತೆನಿ ತಾಬೊಡ್ತೊಬ್ ದಾರ್ ಕಾಡ್ತ್ಯಾತ್. ಅಧ್ಯಾಯವನ್ನು ನೋಡಿ |