ಲೂಕ 12:46 - ಕನ್ನಡ ಸತ್ಯವೇದವು J.V. (BSI)46 ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿನವಾಗಿ ಹೊಡಿಸಿ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ತನ್ನಾ ತ್ಯಾ ಆಳಾಕ್ ಗೊತ್ತ್ ನಸಲ್ಲ್ಯಾ ಎಳಾರ್, ಧನಿ ಯೆತಾ, ಅನಿ ತೆಚೆ ತುಕ್ಡೆ ತುಕ್ಡೆ ಕರ್‍ತಾ ಅನಿ ಎಕ್ ದಿಸ್ ವಿಶ್ವಾಸ್ ಘಾತ್ಕ್ಯಾಂಚ್ಯಾ ಜಾಗ್ಯಾರ್, ತೆಕಾ ಥವ್ತಾ. ಅಧ್ಯಾಯವನ್ನು ನೋಡಿ |