Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:56 - ಕನ್ನಡ ಸತ್ಯವೇದವು J.V. (BSI)

56 ಕಪಟಿಗಳು ನೀವು, ಭೂಮ್ಯಾಕಾಶಗಳ ಭಾವವನ್ನು ಶೋಧಿಸುವದಕ್ಕೆ ನಿಮಗೆ ಗೊತ್ತಿರುವಲ್ಲಿ ಈ ಸಮಯವನ್ನು ಶೋಧಿಸುವದಕ್ಕೆ ನಿಮಗೆ ಯಾಕೆ ಗೊತ್ತಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ನೀವು ಕಪಟಿಗಳು! ಹವಾಮಾನವನ್ನು ತಿಳಿದುಕೊಳ್ಳಬಲ್ಲ ನೀವು ಈಗ ನಡೆಯುತ್ತಿರುವುದನ್ನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಕಪಟಿಗಳೇ! ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಈ ಕಾಲವನ್ನು ನೀವು ವಿವೇಚಿಸದಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ಕುಸ್ಡ್ಯಾನೊ! ತುಮಿ ಜಿಮ್ನಿಕ್, ಅನಿ ಮಳ್ಬಾಕ್ ಬಗುನ್, ಖಲಿ ದಿಸಾ ಕನ್ನಾ ಯೆತ್ಯಾತ್ ಮನುನ್ ಕಳ್ವುನ್ ಘೆತ್ಯಾಶಿ; ತಸೆ ಜಾಲ್ಯಾರ್, ಹ್ಯಾ ಎಳಾಚ್ಯಾ ವಿಶಯಾತ್ ತುಮ್ಕಾ ಕಶ್ಯಾಕ್‍ ಕಳ್ವುನ್ ಘೆವ್ಕ್ ಹೊಯ್ನಾ ಹೊಲಾ?” ಮನುನ್ಬಿ ತೆಂಕಾ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:56
12 ತಿಳಿವುಗಳ ಹೋಲಿಕೆ  

ಬೆಳಿಗ್ಗೆ - ಆಕಾಶವು ಮೋಡಮುಚ್ಚಿಕೊಂಡು ಕೆಂಪಾಗಿದೆ, ಈ ಹೊತ್ತು ಗಾಳಿ ಮಳೆ ಅನ್ನುತ್ತೀರಿ ಅಲ್ಲವೇ. ಆಕಾಶದ ಸ್ಥಿತಿಯನ್ನು ನೋಡಿ ಇದು ಹೀಗೆ ಅದು ಹಾಗೆ ಅನ್ನುವದಕ್ಕೆ ಬಲ್ಲಿರಿ; ಆದರೆ ಈ ಕಾಲದ ಸೂಚನೆಗಳನ್ನು ತಿಳುಕೊಳ್ಳಲಾರಿರಿ.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಇಸ್ಸಾಕಾರ್ಯರಿಂದ ಇನ್ನೂರು ಮಂದಿ ಮುಖ್ಯಸ್ಥರು; ಇವರು ಸಮಯೋಚಿತ ಜ್ಞಾನವುಳ್ಳವರಾಗಿ ಇಸ್ರಾಯೇಲ್ಯರು ಮಾಡತಕ್ಕದ್ದನ್ನು ಅರಿತವರು; ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಒಳಗಾಗಿದ್ದರು;


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು