ಲೂಕ 12:58 - ಕನ್ನಡ ಸತ್ಯವೇದವು J.V. (BSI)58 ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಮುಂದಕ್ಕೆ ಹೋಗುತ್ತಿರುವಾಗ ದಾರಿಯಲ್ಲಿಯೇ ತಂಟೆಹರಿಸಿಕೊಳ್ಳಲು ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು; ನ್ಯಾಯಾಧಿಪತಿಯು ನಿನ್ನನ್ನು ಸೆರೇಯಜಮಾನನ ವಶಕ್ಕೆ ಒಪ್ಪಿಸಾನು; ಸೆರೇಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಒಬ್ಬನು ನಿಮ್ಮ ಮೇಲೆ ದಾವೆ ಹೂಡಲು ನ್ಯಾಯಾಲಯಕ್ಕೆ ಹೋಗುತ್ತಿರುವಾಗ ನಿಮ್ಮ ಸಮಸ್ಯೆಯನ್ನು ದಾರಿಯಲ್ಲಿಯೇ ಪರಿಹರಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ಇಲ್ಲವಾದರೆ, ಅವನು ನಿಮ್ಮನ್ನು ನ್ಯಾಯಾಧೀಶನ ಬಳಿಗೆ ಕೊಂಡೊಯ್ಯುವನು. ನ್ಯಾಯಾಧೀಶನು ನಿಮ್ಮನ್ನು ಸೆರೆಮನೆಗೆ ಹಾಕಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್58 ಕೊನ್ಬಿ ಎಕ್ಲೊ ತುಮ್ಚೆ ವರ್‍ತಿ ಪಿರ್ಯಾದ್ ಘಾಲುನ್ ತುಮ್ಕಾ ನ್ಯಾಯ್ ನಿರ್‍ನಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತಾ ಜಾಲ್ಯಾರ್, ತೆನಿ ತುಮ್ಕಾ ತ್ಯಾ ನ್ಯಾಯ್ ಕರ್‍ತಲ್ಯಾಕ್ಡೆ ಘೆವ್ನ್ ಜವ್ಚ್ಯಾ ಅದ್ದಿಚ್ ತೆಚೆಕ್ಡೆ ರಾಜಿ-ಕುಸಿ-ಹೊವಾ, ಜರ್ ತುಮಿ ಅಶೆ ಕರುಕ್ನ್ಯಾಶಿ, ತರ್ ತೊ ತುಮ್ಕಾ ನ್ಯಾಯ್ ದಿತಲ್ಯಾಚ್ಯಾ ತಾಬೆತ್ ದಿತಾ,ಅನಿ ನ್ಯಾಯ್ ನಿರ್‍ನಯ್ ಕರ್‍ತಲೊ, ತುಮ್ಕಾ ಪೊಲಿಸಾಂಚ್ಯಾ ಹಾತಿತ್ ದಿತಾ, ಅನಿ ತುಮ್ಕಾ ಬಂದಿಖಾನ್ಯಾತ್ ಘಾಲ್ತ್ಯಾತ್. ಅಧ್ಯಾಯವನ್ನು ನೋಡಿ |