Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:11 - ಕನ್ನಡ ಸತ್ಯವೇದವು J.V. (BSI)

11 ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೆವ್ವದಿಂದ ಪೀಡಿತಳಾಗಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆ ದೆವ್ವದಿಂದಾಗಿ ಆಕೆಗೆ ಹದಿನೆಂಟು ವರ್ಷಗಳಿಂದ ನಡು ಬಗ್ಗಿಕೊಂಡಿತ್ತು. ನೆಟ್ಟಗೆ ನಿಂತುಕೊಳ್ಳಲು ಆಕೆಗೆ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಎಕ್ ಗಿರೊಲಾಗಲ್ಲಿ ಬಾಯ್ಕೊಮನುಸ್ ಹೊತ್ತಿ, ತೆನಿ ತಿಕಾ ಅಟ್ರಾ ವರ್ಸಾ ಅರಾಮನತ್ತ್ಯಾ ಸಾರ್ಕೆ ಕರಲ್ಲ್ಯಾನ್, ತಿ ಬಾಗುನ್ ಗೆಲ್ಲಿ, ತಿಕಾ ವಟ್ಟೊಚ್ ಇಬೆ ರಾವ್ಕ್ ಹೊಯ್ನಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:11
20 ತಿಳಿವುಗಳ ಹೋಲಿಕೆ  

ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರಂದರೆ - ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲದವಳೆಂಬ ಮರಿಯಳು,


ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್‍ದಿನದಲ್ಲಿ ಈ ಕಟ್ಟಿನೊಳಗಿಂದ ಬಿಡಿಸಬಾರದೋ ಎಂದು ಉತ್ತರಕೊಟ್ಟನು.


ಆತನು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಬಹುಕಾಲದಿಂದ ಬಟ್ಟೆಯನ್ನೇ ಹಾಕಿಕೊಳ್ಳದೆ ಯಾವ ಮನೆಯಲ್ಲಿಯೂ ಇರದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.


ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ತತ್ತರಿಸುತ್ತವೆ.


ಈ ಸೂಚಕಕಾರ್ಯದಿಂದ ಸ್ವಸ್ಥತೆಹೊಂದಿದ ಆ ಮನುಷ್ಯನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.


ಆಗ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಬಂದಳು.


ಯೇಸು ಅವನ ತಂದೆಯನ್ನು - ಇದು ಇವನಿಗೆ ಬಂದು ಎಷ್ಟು ದಿನವಾಯಿತು ಎಂದು ಕೇಳಿದಾಗ ಅವನು - ಚಿಕ್ಕಂದಿನಲ್ಲಿಯೇ ಬಂದಿದೆ;


ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.


ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಕುರುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.


ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು;


ಆದರೆ ಇವು ಸಂಭವಿಸುವದಕ್ಕೆ ತೊಡಗುವಾಗ ಮೇಲಕ್ಕೆ ನೋಡಿರಿ, ನಿಮ್ಮ ತಲೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು