Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:17 - ಕನ್ನಡ ಸತ್ಯವೇದವು J.V. (BSI)

17 ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹ್ಯಾ ಜೆಜುಚ್ಯಾ ಜಬಾಬಾನ್ ತೆಚ್ಯಾ ದುಸ್ಮಾನಾಕ್ನಿ ಲಜ್ಜಾ ಕರ್‍ಲಿ, ಲೊಕಾ ಜೆಜುನ್ ಕರಲ್ಲಿ ಮೊಟಿ-ಮೊಟಿ ವಿಚತ್ರ್ ಕಾಮಾ ಬಗುನ್ ಕುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:17
19 ತಿಳಿವುಗಳ ಹೋಲಿಕೆ  

ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವದು.


ಆದರೆ ಅವರ ಪ್ರಯತ್ನವು ಇನ್ನು ಸಾಗುವದಿಲ್ಲ; ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದುಬಂದ ಪ್ರಕಾರ ಇವರದೂ ತಿಳಿದುಬರುವದು.


ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.


ಆತನನ್ನು ಇನ್ನೇನು ಕೇಳುವದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಆದರೆ ಜನರೆಲ್ಲರು ಆತನನ್ನು ಅಂಟಿಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದದರಿಂದ ಏನು ಮಾಡಬೇಕೋ ತೋರಲಿಲ್ಲ.


ತಕ್ಷಣವೇ ಅವನಿಗೆ ಕಣ್ಣುಬಂದವು; ಅವನು ದೇವರನ್ನು ಕೊಂಡಾಡುತ್ತಾ ಆತನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.


ಅವರು ಅದಕ್ಕೆ ಉತ್ತರ ಕೊಡಲಾರದೆ ಇದ್ದರು.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ಆತನ ಕಾರ್ಯವು ಘನಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವದು.


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ನನ್ನ ಪ್ರಾಣವನ್ನು ತೆಗೆಯುವದಕ್ಕೆ ಸಮಯ ನೋಡುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ಆಗ ನಮ್ಮನ್ನು ಎದುರಿಸುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವದಕ್ಕೆ ಅವಕಾಶವಿಲ್ಲದೆ ನಾಚಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು