Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:2 - ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಆತನು ಅವರಿಗೆ - ಆ ಗಲಿಲಾಯದವರು ಅಂಥ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಯೇಸು, “ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ಅವರಿಗೆ, “ಕೊಲೆಗೀಡಾದವರು ಗಲಿಲಾಯದ ಇತರರೆಲ್ಲರಿಗಿಂತ ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಗೆ ಈಡಾದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ದೋಷಿಗಳೆಂದು ನೀವು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜುನ್ ತೆಂಕಾ “ತಿ ಗಾಲಿಲಿಯಾಚಿ ಜಿವಾನಿ ಮಾರಲ್ಲಿ ಲೊಕಾ, ಹುರಲ್ಲ್ಯಾ ಸಗ್ಳ್ಯಾಂಚ್ಯಾನ್ಕಿ ಲೈ ಪಾಪಿ ಲೊಕಾ ಮನುನ್ ತುಮಿ ಯೌಜುಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:2
6 ತಿಳಿವುಗಳ ಹೋಲಿಕೆ  

ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ


ಆ ಜಂತು ಅವನ ಕೈಯಿಂದ ಜೋತಾಡುವದನ್ನು ದ್ವೀಪದವರು ನೋಡಿ - ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಇವನನ್ನು ಬದುಕಗೊಡಿಸುವದಿಲ್ಲವೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?


ಅದೇ ಸಮಯದಲ್ಲಿ ಕೆಲವರು ಆತನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು