Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:24 - ಕನ್ನಡ ಸತ್ಯವೇದವು J.V. (BSI)

24 ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಸ್ವರ್ಗಕ್ಕೆ ನಡೆಸುವ ಕಿರಿದಾದ ಬಾಗಿಲಿನ ಮೂಲಕ ಹೋಗಲು ಪ್ರಯಾಸಪಡಿರಿ! ಅನೇಕ ಜನರು ಅದರ ಮೂಲಕ ಹೋಗಲು ಪ್ರಯತ್ನಿಸುತ್ತಾರೆ. ಆದರೆ ಅವರಿಂದ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಬಾರಿಕ್ಲ್ಯಾ ದಾರಾತ್ನಾ ಭುತ್ತುರ್ ಗುಸುಕ್ ಖಟ್ಪಟ್ ಕರಾ; ಕಶ್ಯಾಕ್ ಮಟ್ಲ್ಯಾರ್, ಲೈ ಲೊಕಾ ತ್ಯಾತುರ್ ಗುಸುಕ್ ಕಸ್‍ರತ್ ಕರ್‍ತ್ಯಾತ್, ಖರೆ ತೆಂಕಾ ಗುಸುಕ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:24
26 ತಿಳಿವುಗಳ ಹೋಲಿಕೆ  

ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಸೋಮಾರಿಯ ಆಶೆಯು ಅವನನ್ನು ಕೊಲ್ಲುವದು, ಅವನ ಕೈಗಳು ದುಡಿಯಲೊಲ್ಲವಷ್ಟೆ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.


ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ, ನಾನು ಇರುವಲ್ಲಿಗೆ ನೀವು ಬರಲಾರಿರಿ ಅಂದನು.


ಪಟ್ಟಣದ ದಾರಿ ತಿಳಿಯದವನಿಗೆ ಮೂಢರು [ತಿಳಿಸಲು] ಪಡುವ ಪ್ರಯಾಸದಿಂದ ಆಯಾಸವೇ.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ.


ಧರ್ಮನಿಂದಕನಿಗೆ ಹುಡುಕಿದರೂ ಜ್ಞಾನವು ಸಿಕ್ಕದು; ವಿವೇಕಿಗೆ ತಿಳುವಳಿಕೆಯು ಸುಲಭವಾಗಿ ದೊರೆಯುವದು.


ಪ್ರಿಯ ಮಕ್ಕಳೇ, ಇನ್ನು ಸ್ವಲ್ಪಕಾಲವೇ ನಿಮ್ಮ ಸಂಗಡ ಇರುತ್ತೇನೆ. ನನ್ನನ್ನು ಹುಡುಕುವಿರಿ, ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆ ಈಗ ನಿಮಗೂ ಹೇಳುತ್ತೇನೆ.


ಆ ಕಾಲದಲ್ಲಿ ಒಬ್ಬನು - ಸ್ವಾಮೀ, ರಕ್ಷಣೆ ಹೊಂದುವವರು ಸ್ವಲ್ಪಜನರೋ ಎಂದು ಕೇಳಲು


ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು