ಲೂಕ 13:32 - ಕನ್ನಡ ಸತ್ಯವೇದವು J.V. (BSI)32 ಆತನು ಅವರಿಗೆ - ನೀವು ಹೋಗಿ - ಇಗೋ ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ ಎಂದು ಆ ನರಿಗೆ ಹೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅದಕ್ಕೆ ಯೇಸು, “ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯಸಿದ್ಧಿಗೆ ಬರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೇಸು ಅವರಿಗೆ, “ನೀವು ಹೋಗಿ ಆ ನರಿಗೆ (ಹೆರೋದನಿಗೆ), ‘ಈ ದಿನ ಮತ್ತು ನಾಳೆ ನಾನು ಜನರನ್ನು ದೆವ್ವಗಳಿಂದ ಬಿಡಿಸುತ್ತೇನೆ ಮತ್ತು ರೋಗಿಗಳನ್ನು ಗುಣಪಡಿಸುವ ಕಾರ್ಯವನ್ನು ಪೂರ್ಣಗೊಳಿಸುತ್ತೇನೆ. ನಾಳಿದ್ದು, ನನ್ನ ಕಾರ್ಯವೆಲ್ಲಾ ಸಂಪೂರ್ಣ ಮುಕ್ತಾಯವಾಗುವುದು’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಜೆಜುನ್ ತೆಂಕಾ, “ಜಾವಾ, ಅನಿ ತ್ಯಾ ಕೊಲ್ಯಾಕ್, ಆಜ್ ಅನಿ ಉದ್ದ್ಯಾ ಮಾಕಾ ಗಿರೆ ಕಾಡ್ತಲೆ, ಅನಿ ಲೊಕಾಕ್ನಿ ಗುನ್ ಕರ್‍ತಲೆ ಕಾಮ್ ಹಾಯ್, ತಿನ್ವ್ಯಾ ದಿಸಿ ಮಿಯಾ ತೆ ಸಾರುನ್ ಘೆತಾ.ಮನುನ್ ಸಾಂಗಾ. ಅಧ್ಯಾಯವನ್ನು ನೋಡಿ |