Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:7 - ಕನ್ನಡ ಸತ್ಯವೇದವು J.V. (BSI)

7 ಬಳಿಕ ಅವನು ತೋಟ ಮಾಡುವವನಿಗೆ - ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು; ಇದರಿಂದ ಭೂವಿುಯೂ ಯಾಕೆ ಬಂಜೆಯಾಗಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದುಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ‘ಈ ಮರವು ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಮನುನ್ ತೆನಿ ಅಪ್ನಾಚ್ಯಾ ಮಳ್ಯಾತ್ ಕಾಮ್ ಕರ್‍ತಲ್ಯಾಕ್ “ಬಗ್, ತಿನ್ ವರ್ಸಾಕ್ನಾ ಮಿಯಾ ಹ್ಯಾ ಝಾಡಾಚಿ ಫಳಾ ಹುಡ್ಕುಕ್ ಯೆವ್ಲಾ, ಖರೆ ಮಾಕಾ ಎಕ್ ಸೈತ್ ಅಂಜುರಾಚೆ ಫಳ್ ಗಾವಿನಾ ಹೊಲಾ. ಜಿಮ್ನಿಕ್ ವಜ್ಜೆ ಹೊವ್ನ್ ಕಶ್ಯಾಕ್ ರ್‍ಹಾತಲೆ ತೆ,ತೊಡುನ್ ಟಾಕ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:7
11 ತಿಳಿವುಗಳ ಹೋಲಿಕೆ  

ಒಳ್ಳೇ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.


ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು ಎಂದು ಹೇಳಿದನು.


ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ಆದಕಾರಣ ನೀನು ನನ್ನನ್ನು ತಡೆಯಬೇಡ; ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡುವೆನು. ತರುವಾಯ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗವುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!


ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರುಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.


ಆರನೆಯ ವರುಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರುಷಗಳ ಬೆಳೆಯಷ್ಟಾಗುವದು.


ಆದರೆ ತೋಟಮಾಡುವವನು - ಅಯ್ಯಾ, ಈ ವರುಷವೂ ಇದನ್ನು ಬಿಡು; ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು