Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:8 - ಕನ್ನಡ ಸತ್ಯವೇದವು J.V. (BSI)

8 ಆದರೆ ತೋಟಮಾಡುವವನು - ಅಯ್ಯಾ, ಈ ವರುಷವೂ ಇದನ್ನು ಬಿಡು; ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆ ಸೇವಕನು, ‘ಯಜಮಾನನೇ, ಇನ್ನೊಂದು ವರ್ಷ ತಾಳಿಕೊ. ಅದು ಫಲವನ್ನು ಕೊಡಬಹುದು. ಅದರ ಸುತ್ತಲೂ ಅಗೆದು ಸ್ವಲ್ಪ ರಸಗೊಬ್ಬರವನ್ನು ಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ಅವನು ಉತ್ತರವಾಗಿ ಅವನಿಗೆ, ‘ಒಡೆಯನೇ, ಇನ್ನೊಂದು ವರ್ಷವೂ ಇದನ್ನು ಬಿಡು, ನಾನು ಅದರ ಸುತ್ತಲೂ ಅಗಿದು ಗೊಬ್ಬರ ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ, ತ್ಯಾ ಕಾಮ್ ಕರ್‍ತಲ್ಯಾನ್, “ಸಾವ್ಕಾರ್, ತೊಡ್ತಲೆ ನಕ್ಕೊ ರಾಂವ್ದಿತ್; ಮಿಯಾ ತೆಚ್ಯಾ ಮುಳಾತ್ ಕೊಚುನ್, ತೆಕಾ ಗೊಬರ್ ಘಾಲ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:8
17 ತಿಳಿವುಗಳ ಹೋಲಿಕೆ  

ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆಹೊಂದಬೇಕೆಂಬದೇ ನನ್ನ ಮನೋಭಿಲಾಷೆಯೂ ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.


ಬಳಿಕ ಅವನು ತೋಟ ಮಾಡುವವನಿಗೆ - ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು; ಇದರಿಂದ ಭೂವಿುಯೂ ಯಾಕೆ ಬಂಜೆಯಾಗಬೇಕು ಎಂದು ಹೇಳಿದನು.


ಮುಂದೆ ಹಣ್ಣುಬಿಟ್ಟರೆ ಸರಿ; ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು ಎಂದು ಉತ್ತರಕೊಟ್ಟನು.


ಅದು ಭೂವಿುಗಾದರೂ ತಿಪ್ಪೆಗಾದರೂ ಉಪಯೋಗವಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು