Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:1 - ಕನ್ನಡ ಸತ್ಯವೇದವು J.V. (BSI)

1 ಆತನು ಸಬ್ಬತ್‍ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಂದು ಸಬ್ಬತ್‍ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ಸಬ್ಬತ್ ದಿನದಲ್ಲಿ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದನು. ಅಲ್ಲಿದ್ದ ಜನರೆಲ್ಲರೂ ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಒಂದು ಸಬ್ಬತ್ ದಿನದಲ್ಲಿ, ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ, ಎಲ್ಲರು ಅವರನ್ನು ಗಮನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ಸಬ್ಬತಾಚ್ಯಾ ದಿಸಿ, ಜೆಜು ಎಕ್ ಫಾರಿಜೆವಾಂಚ್ಯಾ ವಡಿಲಾಚ್ಯಾ ಘರಾತ್ ಜೆವ್ನಾಕ್ ಗೆಲ್ಲೊ, ಅನಿ ಲೊಕಾ ಜೆಜುಕ್ ಎಗ್ದಮ್ ಜಗ್ಗೊಳ್ನಾ ಬಗುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:1
19 ತಿಳಿವುಗಳ ಹೋಲಿಕೆ  

ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆಲೋಚಿಸಿ ಸಬ್ಬತ್‍ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಾ ಇದ್ದರು.


ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು.


ಆತನು ಮಾತಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕೂತುಕೊಂಡನು.


ಅವನನ್ನು ಉನ್ನತಸ್ಥಾನದಿಂದ ದೊಬ್ಬುವದೇ ಅವರ ಆಲೋಚನೆ. ಸುಳ್ಳಾಡುವದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ.


ಅವರಲ್ಲೊಬ್ಬನು ನನ್ನನ್ನು ನೋಡುವದಕ್ಕೆ ಬಂದರೆ ಕಪಟದ ಮಾತನ್ನಾಡುವನು; ಮನಸ್ಸಿನಲ್ಲಿ ಅಶುಭಗಳನ್ನು ಸಂಗ್ರಹಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.


ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ಸಿಕ್ಕಬೇಕೆಂದು ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.


ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ; ಉಣ್ಣು, ಕುಡಿ, ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.


ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.


ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.


ಆದರೆ ಎಲ್ಲಾ ಜನರಿಂದ ಮಾನಹೊಂದಿದ ನ್ಯಾಯಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟು ಸಭೆಯವರಿಗೆ -


ಕುರಿಗಿಂತ ಮನುಷ್ಯನು ಎಷ್ಟೋ ಹೆಚ್ಚು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೇ ಕೆಲಸ ಮಾಡುವದು ತಕ್ಕದ್ದೇ ಸರಿ ಎಂದು ಉತ್ತರಕೊಟ್ಟು ಆ ಮನುಷ್ಯನಿಗೆ -


ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವದನ್ನು ನೋಡಿ -


ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ - ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವಂಥದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು