Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:10 - ಕನ್ನಡ ಸತ್ಯವೇದವು J.V. (BSI)

10 ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕೂತುಕೋ; ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ - ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ ಅನ್ನುವನು. ಆಗ ನಿನ್ನ ಸಂಗಡ ಕೂತಿರುವವರೆಲ್ಲರ ಮುಂದೆ ನಿನಗೆ ಮಾನ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಬದಲಾಗಿ ನಿನ್ನನ್ನು ಆಹ್ವಾನಿಸಿದಾಗ ಕಡೆಯ ಸ್ಥಳದಲ್ಲಿ ಹೋಗಿ ಕುಳಿತುಕೋ. ಕರೆದವನು ಬಂದು, ‘ಗೆಳೆಯಾ, ಮೇಲೆ ಬಾ’ ಎಂದು ಹೇಳುವನು. ಆಗ ಜೊತೆಗೆ ಕುಳಿತಿರುವ ಅತಿಥಿಗಳೆಲ್ಲರ ಮುಂದೆ ನಿನಗೆ ಗೌರವ ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ‘ಸ್ನೇಹಿತನೇ, ಉನ್ನತವಾದ ಈ ಸ್ಥಳದಲ್ಲಿ ಕುಳಿತುಕೊ!’ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನಿನ್ನನ್ನು ಆಹ್ವಾನಿಸಿದಾಗ, ಹೋಗಿ ಕಡೇ ಸ್ಥಳದಲ್ಲಿ ಕುಳಿತುಕೋ, ಆಗ ನಿನ್ನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಸ್ನೇಹಿತನೇ, ಉತ್ತಮ ಸ್ಥಳಕ್ಕೆ ಬಾ,’ ಎಂದು ಹೇಳುವಾಗ ನಿನ್ನ ಜೊತೆಯಲ್ಲಿ ಊಟಕ್ಕೆ ಕುಳಿತವರೆಲ್ಲರ ಮುಂದೆ ನಿನಗೆ ಗೌರವವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆ ಮನುನ್, ತುಮ್ಕಾ ಖೈಬಿ ಬಲ್ವಲ್ಲ್ಯಾ ತನ್ನಾ, ಫಾಟ್ಲ್ಯಾ ಜಾಗ್ಯಾ ವರ್‍ತಿ ಜಾವ್ನ್ ಬಸಾ, ತನ್ನಾ ತುಮ್ಕಾ ಬಲ್ವಲ್ಲೊ ಮಾನುಸ್ ತುಮ್ಚೆಕ್ಡೆ ಯೆವ್ನ್ “ದೊಸ್ತಾ, ವೈರ್ ಬರ್‍ಯಾ ಜಾಗ್ಯಾರ್ ಯೆವ್ನ್ ಬಸ್”, ಮನುನ್ ತುಮ್ಕಾ ಸಾಂಗ್ತಾನಾ, ಥೈ ಯೆಲ್ಲ್ಯಾ ಲೊಕಾಂಚ್ಯಾ ಇದ್ರಾಕ್ ತುಕಾ ಮಾನ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:10
5 ತಿಳಿವುಗಳ ಹೋಲಿಕೆ  

ಯೆಹೋವನ ಭಯವೇ ಜ್ಞಾನೋಪದೇಶ; ಗೌರವಕ್ಕೆ ಮೊದಲು ವಿನಯ.


ಸಮುವೇಲನು - ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದಿ.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು