ಲೂಕ 14:21 - ಕನ್ನಡ ಸತ್ಯವೇದವು J.V. (BSI)21 ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೇಯಜಮಾನನು ಸಿಟ್ಟುಗೊಂಡು ಆಳಿಗೆ - ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು ಊನವಾದವರು ಕುರುಡರು ಕುಂಟರು ಇಂಥವರನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 “ಪರ್ತುನ್ ಜಾವ್ನ್ ಆಳಾನ್ ಹೆ ಸಗ್ಳೆ ಅಪ್ನಾಚ್ಯಾ ಧನಿಯಾಕ್ ಸಾಂಗಟ್ಲ್ಯಾನ್. ತನ್ನಾ ಧನಿಯಾಕ್ ರಾಗ್ ಯೆಲೊ, ಅನಿ ಧನಿಯಾನ್ ಆಳಾಕ್” ತಾಬೊಡ್ತೊಬ್ ಶಾರಾನಿತ್ನಿ, ವನಿಯಾತ್ನಿ, ಸಂದ್ಡಿಯಾತ್ನಿ ಜಾ, ಅನಿ ಗರಿಬಾಕ್ನಿ, ಸೊಟ್ಟ್ಯಾಕ್ನಿ, ಕುಡ್ಡ್ಯಾಕ್ನಿ, ಅದು ಹೊತ್ತ್ಯಾಕ್ನಿ ಬಲ್ವುನ್ ಘೆವ್ನ್ ಯೆ, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |