Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:23 - ಕನ್ನಡ ಸತ್ಯವೇದವು J.V. (BSI)

23 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತಸೆ ಮನ್ತಾನಾ, ಧನಿಯಾನ್ ಆಳಾಕ್, “ದೆಸಾತ್ಲ್ಯಾ ಸಗ್ಳ್ಯಾ ರಸ್ತ್ಯಾ ವೈನಿ. ಅನಿ ವನಿಯಾತ್ನಿ ಜಾ, ಅನಿ ಶೆತಾಂಚ್ಯಾ ವಾಟಾ ವೈನಿ ಜಾವ್ನ್ ಸಗ್ಳ್ಯಾ ಲೊಕಾಕ್ನಿ ಬಲ್ವುನ್ ಹಾನ್, ಅನಿ ಮಾಜೆ ಸಗ್ಳೆ ಘರ್ ಭರುಂದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:23
37 ತಿಳಿವುಗಳ ಹೋಲಿಕೆ  

ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.


ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.


ಒಬ್ಬನು - ಒಂದು ಮೈಲು ದೂರ ಬಾ ಎಂದು ನಿನ್ನನ್ನು ಬಿಟ್ಟೀಹಿಡಿದರೆ ಅವನ ಸಂಗಡ ಎರಡು ಮೈಲು ಹೋಗು.


ಬಳಿಕ ಆ ಆಳು - ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳವದೆ ಅಂದನು.


ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು ಎಂದು ನಿಮಗೆ ಹೇಳುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು