Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:24 - ಕನ್ನಡ ಸತ್ಯವೇದವು J.V. (BSI)

24 ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು ಎಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!’ ಎಂದು ಸ್ಪಷ್ಟಪಡಿಸಿದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ಮೊದಲನೆ ಸಲ ಆಮಂತ್ರಿಸಿದ ಆ ಜನರಲ್ಲಿ ಒಬ್ಬರಾದರೂ ನನ್ನೊಂದಿಗೆ ಊಟಮಾಡಕೂಡದು!’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಿಯಾ ತುಕಾ ಸಾಂಗ್ತಾ, ಮಿಯಾ ಅದ್ದಿ ಬಲ್ವಲ್ಲ್ಯಾನಿತ್ಲ್ಯಾ ಎಕ್ಲ್ಯಾನ್‍ಬಿ ಮಾಜ್ಯಾ ಜೆವ್ನಾಚಿ ರುಚಿ ಬಗುಕ್ ಗಾವುಚೆ ನ್ಹಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:24
12 ತಿಳಿವುಗಳ ಹೋಲಿಕೆ  

ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ಆಗ ತನ್ನ ಆಳುಗಳಿಗೆ - ಮದುವೆಗೆ ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.


ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು