ಲೂಕ 14:28 - ಕನ್ನಡ ಸತ್ಯವೇದವು J.V. (BSI)28 ನಿಮ್ಮಲ್ಲಿ ಯಾವನಾದರೂ ಒಂದು ಬುರುಜನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕೂತುಕೊಂಡು - ಅದಕ್ಕೆ ಎಷ್ಟು ಖರ್ಚು ಹಿಡಿದೀತು, ಅದನ್ನು ತೀರಿಸುವದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಉಂಟೋ ಎಂದು ಲೆಕ್ಕಮಾಡುವದಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕಹಾಕುವುದಿಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಆ ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 “ತುಮಿ ಕೊನ್ಬಿ ಎಕ್ ಘರ್ ಭಾಂದ್ತಾನಾ, ತೆ ಘರ್ ಭಾಂದುನ್ ಸಾರಿ ಸರ್ಕೆ ಪೈಸೆ ಅಪ್ನಾಕ್ಡೆ ಹಾತ್ ಕಾಯ್ ನಾ,ಮನುನ್ ಅದ್ದಿಚ್ ಯವ್ಜನ್ ಘಾಲಿನ್ಯಾಶಿ ಕಾಯ್”, ಅಧ್ಯಾಯವನ್ನು ನೋಡಿ |