Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:31 - ಕನ್ನಡ ಸತ್ಯವೇದವು J.V. (BSI)

31 ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕೂತುಕೊಂಡು ಆಲೋಚಿಸುವದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಒಬ್ಬ ಅರಸನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವಾಗ, ಮೊದಲು ಅವನು ಕುಳಿತುಕೊಂಡು ಯೋಜನೆ ಮಾಡುವನು. ಅರಸನ ಬಳಿಯಲ್ಲಿ ಕೇವಲ ಹತ್ತುಸಾವಿರ ಮಂದಿ ಸೈನಿಕರಿದ್ದರೆ, ಇಪ್ಪತ್ತುಸಾವಿರ ಮಂದಿ ಸೈನಿಕರಿರುವ ಇನ್ನೊಬ್ಬ ಅರಸನನ್ನು ಸೋಲಿಸಲು ತನಗೆ ಸಾಧ್ಯವೇ ಎಂದು ಆಲೋಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಅಥವಾ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಾಗ, ಮೊದಲು ಕುಳಿತು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ ಸೈನ್ಯದೊಂದಿಗೆ ಬರುವ ಆ ಅರಸನನ್ನು ತನ್ನ ಹತ್ತು ಸಾವಿರ ಸೈನ್ಯದೊಂದಿಗೆ ಎದುರಿಸುವುದಕ್ಕೆ ಸಮರ್ಥವೋ ಎಂದು ಆಲೋಚನೆ ಮಾಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ಎಕ್ಲೊ ಧಾ ಹಜಾರ್ ಸೈನಿಕಾ ಹೊತ್ತೊ ರಾಜಾ, ಎಕ್ಲ್ಯಾ ಇಸ್ ಹಜಾರ್ ಸೈನಿಕಾ ಹೊತ್ತ್ಯಾ ರಾಜಾಚ್ಯಾ ವಾಂಗ್ಡಾ ಝಗ್ಡೊ ಕರುಕ್ ಮನುನ್ ಜಾತಾನಾ, ತೊ ಅದ್ದಿಚ್ ಬಸುನ್, ಅಪ್ನಾಚ್ಯಾನ್ ತೆಚ್ಯಾ ವಾಂಗ್ಡಾ ಝಗ್ಡುನ್ ಜಿಕುಕ್ ಹೊತಾ ಕಾಯ್ ನಾ”, ಮನುನ್ ಯವ್ಜುನ್ ಬಗ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:31
7 ತಿಳಿವುಗಳ ಹೋಲಿಕೆ  

ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು; ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ; ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ!


ಇಸ್ರಾಯೇಲ್ಯರ ಅರಸನು ಬಂದ ದೂತರಿಗೆ - ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ ಅಂದನು.


ಈ ಮನುಷ್ಯನು ಕಟ್ಟಿಸುವದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆಹೋದನು ಎಂದು ಅವನನ್ನು ಹಾಸ್ಯಮಾಡಾರು.


ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಕೇಳಿಕೊಳ್ಳುವನು.


ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು