Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:7 - ಕನ್ನಡ ಸತ್ಯವೇದವು J.V. (BSI)

7 ಊಟಕ್ಕೆ ಕರಿಸಿಕೊಂಡವರು ಪಂಙ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. ಏನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲದೆ, ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅತಿಥಿಗಳಾಗಿ ಬಂದಿದ್ದ ಕೆಲವರು ಊಟಕ್ಕೆ ಕುಳಿತುಕೊಳ್ಳಲು ಉತ್ತಮವಾದ ಸ್ಥಳಗಳನ್ನು ಆರಿಸಿಕೊಳ್ಳುತ್ತಿರುವುದನ್ನು ಕಂಡ ಯೇಸು ಈ ಸಾಮ್ಯವನ್ನು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಉಲ್ಲೆಸೆ ಸೊಯ್ರೆ ಬರೆ ಬರೆ ಜಾಗೆ ಹುಡಕ್ತಲೆ ಜೆಜುನ್ ಬಗಟ್ಲ್ಯಾನ್. ತೆ ಬಗುನ್ ಜೆಜುನ್ ತೆಂಕಾ, ಹಿ ಕಾನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:7
12 ತಿಳಿವುಗಳ ಹೋಲಿಕೆ  

ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳೂ ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳೂ ನಿಮಗೆ ಇಷ್ಟ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಇದಲ್ಲದೆ ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಅಂಗಡೀ ಬೀದಿಗಳಲ್ಲಿ ನಮಸ್ಕಾರಗಳು,


ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನ, ಇವುಗಳಲ್ಲಿ ಇಷ್ಟವುಳ್ಳವರೂ ಆಗಿದ್ದಾರೆ.


ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುವದಿಲ್ಲ. ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳ ವಿಷಯದಲ್ಲಿ ಎಲ್ಲರಿಗೂ ನೆನಪುಕೊಡುವೆನು.


ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು -


ಯೇಸು ಈ ಮಾತುಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು; ಸಾಮ್ಯವಿಲ್ಲದೆ ಒಂದನ್ನೂ ಹೇಳಲಿಲ್ಲ.


ಜ್ಞಾನವೆಂಬಾಕೆಯು ಕರೆಯುತ್ತಾಳೆ, ವಿವೇಕವೆಂಬ ಆಕೆಯೇ ದನಿಗೈಯುತ್ತಾಳೆ.


ಸಂಸೋನನು ಇವರಿಗೆ - ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.


ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವದಕ್ಕಿಂತಲೂ ಇನ್ನೂ ಮೇಲಕ್ಕೆ ಬಾ ಎಂದು ಕರೆಯಿಸಿಕೊಳ್ಳುವದು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು