Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:10 - ಕನ್ನಡ ಸತ್ಯವೇದವು J.V. (BSI)

10 ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ಎಕ್ ಪಾಪಿ ಮಾನುಸ್, ಅಪ್ನಾಚೆ ಜಿವನ್ ಬದ್ಲುನ್ ಬರೊ ಹೊಲ್ಲ್ಯಾ ತನ್ನಾ, ದೆವಾಚ್ಯಾ ದುತಾಕ್ನಿ ಲೈ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:10
23 ತಿಳಿವುಗಳ ಹೋಲಿಕೆ  

ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.


ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವುಂಟೋ? ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.


ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಸಾಯುವವರ ಸಾವಿನಲ್ಲಿ ನನಗೆ ಸಂತೋಷವಿಲ್ಲ; ತಿರುಗಿಕೊಂಡು ಬಾಳಿರಿ; ಇದು ಕರ್ತನಾದ ಯೆಹೋವನ ನುಡಿ.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಹೀಗಿರಲು ನಾನು ಹೇಳುವ ಮಾತೇನಂದರೆ - ಇವಳ ಪಾಪಗಳು ಬಹಳವಾಗಿದ್ದರೂ ಅವು ಕ್ಷವಿುಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷವಿುಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ ಅಂದನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸಲ್ಪಟ್ಟದ್ದು ನಿರಂತರವೂ ನಿನ್ನವನಾಗಬೇಕೆಂಬದಕ್ಕೋಸ್ಕರವೋ ಏನೋ.


ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು -


ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ ಮನುಷ್ಯಕುಮಾರನು ಸಹ ಅವನನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.


ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಹೇಳುವಳಲ್ಲವೇ.


ಇನ್ನೂ ಆತನು ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು