Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:15 - ಕನ್ನಡ ಸತ್ಯವೇದವು J.V. (BSI)

15 ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿರ್ಗತಿಕನಾದ ಅವನು ಹೋಗಿ, ಆದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತ ಇವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಅವನು ಆ ದೇಶದ ನಿವಾಸಿಯೊಬ್ಬನ ಬಳಿ ಕೂಲಿಕೆಲಸಕ್ಕೆ ಸೇರಿಕೊಂಡನು. ಆ ಮನುಷ್ಯನು ಹಂದಿ ಮೇಯಿಸುವುದ್ಕಕಾಗಿ ಅವನನ್ನು ಹೊಲಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಹೋಗಿ ಆ ದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿಕೊಂಡನು, ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಚೆಸಾಟ್ನಿ, ತೊ ತ್ಯಾ ದೆಸಾತ್ಲ್ಯಾ ಎಕ್ ಮಾನ್ಸಾಚ್ಯಾ ಘರಾತ್ ಕಾಮಾಕ್ ಗೆಲೊ, ತ್ಯಾ ಸಾವ್ಕಾರಾನ್ ತೆಕಾ ಅಪ್ನಾಚ್ಯಾ ಶೆತಾತ್, ಡುಕ್ರಾ ರಾಕ್ತಲೆ ಕಾಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:15
27 ತಿಳಿವುಗಳ ಹೋಲಿಕೆ  

ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮಶಾಸ್ತ್ರೋಪದೇಶದಲ್ಲಿ ಮುಖದಾಕ್ಷಿಣ್ಯವನ್ನು ತೋರಿಸಿದ್ದರಿಂದ ನಾನಂತು ನಿಮ್ಮನ್ನು ಎಲ್ಲಾ ಜನರ ಮುಂದೆ ಮಾನಗೆಟ್ಟವರನ್ನಾಗಿಯೂ ಕೀಳಾದವರನ್ನಾಗಿಯೂ ಮಾಡುವೆನು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು.


ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ನೋಟವನ್ನಾಗಿ ಮಾಡುವೆನು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿದ್ದೀಯಷ್ಟೆ.


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, [ನನ್ನ ಮುಖವನ್ನು] ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.


ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಶೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು