Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:17 - ಕನ್ನಡ ಸತ್ಯವೇದವು J.V. (BSI)

17 ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಗ ಅವನಿಗೆ ತಾನು ಮಾಡಿದ ಬುದ್ಧಿಹೀನ ಕಾರ್ಯದ ಅರಿವಾಯಿತು. ಅವನು ತನ್ನೊಳಗೆ, ‘ನನ್ನ ತಂದೆಯ ಬಳಿಯಲ್ಲಿರುವ ಸೇವಕರಿಗೆ ಬೇಕಾದಷ್ಟು ಆಹಾರವಿದೆ. ನಾನಾದರೋ ಇಲ್ಲಿ ಊಟವಿಲ್ಲದೆ ಸಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಆಕ್ರಿಕ್, ತೆಕಾ ಅರು ಯೆಲಿ, ಅನಿ “ಮಾಜ್ಯಾ ಬಾಬಾಚೆ ಘರಾತ್, ಸಗ್ಳಿ ಆಳಾ, ಜೆವ್ನ್-ಖಾವ್ನ್ ಹುರಿ ಸರ್ಕೆ, ಮಾಜ್ಯಾ ಬಾಬಾಕ್ಡೆ ಹಾಯ್, ಅನಿ ಮಿಯಾ ಹಿತ್ತೆ, ಭುಕೆನ್ ಮರುಲಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:17
19 ತಿಳಿವುಗಳ ಹೋಲಿಕೆ  

ಅವನು ಯೋಚಿಸಿ ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿಂದ ಸಾಯನು, ಬಾಳೇ ಬಾಳುವನು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪಪಟ್ಟೆನು; ತಿಳುವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು; ನನ್ನ ಯೌವನದ ಅವಮಾನವು ನನ್ನ ಮೇಲೆ ಹೊತ್ತ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.


ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -


ಜನರು ನಡೆದ ಸಂಗತಿಯನ್ನು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಹೆದರಿದರು.


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಭೋಗ್ಯ ವಸ್ತುಗಳನ್ನು ಜ್ಞಾಪಿಸಿಕೊಳ್ಳುತ್ತಾಳೆ; ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ಎಚ್ಚರವಾದವನು ಕನಸನ್ನು ಹೇಗೋ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.


ನನ್ನ ನಡತೆಯನ್ನು ಶೋಧಿಸಿದೆನು. ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.


ಅವಳು ತನ್ನ ವಿುಂಡರನ್ನು ಹಿಂದಟ್ಟಿದರೂ ಅವರನ್ನು ಸಂಧಿಸಳು; ಅವರನ್ನು ಹುಡುಕಿದರೂ ಅವರು ಸಿಕ್ಕರು; ಆಗ ಅವಳು - ನನ್ನ ಮದುವೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು ಅಂದುಕೊಳ್ಳುವಳು.


ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಶೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ.


ಆಗ ಪೇತ್ರನು ಎಚ್ಚರವಾಗಿ - ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿದುಬಂದಿದೆ ಅಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು