Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:18 - ಕನ್ನಡ ಸತ್ಯವೇದವು J.V. (BSI)

18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ಇದೀಗಲೇ ಹೊರಟು, ತಂದೆಯ ಬಳಿಗೆ ಹೋಗಿ, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನು ಎನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಇಲ್ಲಿಂದ ನನ್ನ ತಂದೆಯ ಬಳಿಗೆ ಹೊರಟುಹೋಗುತ್ತೇನೆ. ನಾನು ನನ್ನ ತಂದೆಗೆ, ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ, ಆತನಿಗೆ: ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿಮಗೆ ವಿರೋಧವಾಗಿಯೂ ನಾನು ಪಾಪಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಮಿಯಾ ಉಟ್ತಾ, ಅನಿ ಮಾಜ್ಯಾ ಬಾಬಾಕ್ಡೆ ಜಾತಾ, ಅನಿ ಬಾಬಾ, ತುಜ್ಯಾ ಅನಿ ದೆವಾಚ್ಯಾ ವಾಟೆಕ್ ವ್ಹಾಕ್ಡೆ ಜಾವ್ನ್, ಮಿಯಾ ಪಾಪ್ ಕರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:18
36 ತಿಳಿವುಗಳ ಹೋಲಿಕೆ  

ನಮ್ಮ ನಡತೆಯನ್ನು ಶೋಧಿಸಿ ಪರೀಕ್ಷಿಸಿ ಯೆಹೋವನ ಕಡೆಗೆ ತಿರುಗಿಕೊಳ್ಳೋಣ.


ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ ಎಂದು ಹೇಳಲು


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.


ನೀವು ಜನರ ತಪ್ಪುಗಳನ್ನು ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷವಿುಸುವನು.


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿವಿುತ್ತ ಅದನ್ನು ಕ್ಷವಿುಸು.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ; ಬೆತ್ತದ ಏಟಿಗೆ ಸಾಯನು.


ಅವನ ದೇವಪ್ರಾರ್ಥನೆಯೂ ಅವನಿಗೆ ದೊರಕಿದ ಸದುತ್ತರವೂ ಅವನು ತನ್ನನ್ನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಮಾಡಿದ ಅಪರಾಧದ್ರೋಹಗಳೂ ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಅಶೇರಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಿಗಳ ಚರಿತ್ರೆಯಲ್ಲಿ ಬರೆದಿರುತ್ತವೆ.


ಅದಕ್ಕಾತನು - ನೀವು ಪ್ರಾರ್ಥಿಸುವಾಗ - ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.


ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು.


ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನಂದರೆ ಪರಲೋಕಕ್ಕೆ ಸರ್ವಾಧಿಕಾರವುಂಟೆಂಬದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು ಎಂಬದೇ.


ಒಂದು ವೇಳೆ ಸುಗತಿಯಾದೀತೆಂದು ತನ್ನ ಬಾಯಿಯನ್ನು ದೂಳಿಗೆ ಮುಟ್ಟಿಸಲಿ.


ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.


ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು