Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:2 - ಕನ್ನಡ ಸತ್ಯವೇದವು J.V. (BSI)

2 ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಫಾರಿಜೆವಾ ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಹೆ ಬಗುನ್ “ಹ್ಯೊ ಮಾನುಸ್ ಪಾಪಿ ಲೊಕಾಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೆಂಚ್ಯಾ ವಾಂಗ್ಡಾ ಜೆವಾನ್‍ಬಿ ಕರ್‍ತಾ” ಮನುನ್ ಬೊಲುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:2
12 ತಿಳಿವುಗಳ ಹೋಲಿಕೆ  

ಫರಿಸಾಯರು ಅದನ್ನು ನೋಡಿ ಆತನ ಶಿಷ್ಯರನ್ನು - ನಿಮ್ಮ ಗುರುವು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟಮಾಡುತ್ತಾನೆ ಎಂದು ಕೇಳಿದರು.


ಇದನ್ನು ನೋಡಿದವರೆಲ್ಲರು - ಈತನು ಪಾಪಿಯಾಗಿರುವವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಹೋಗಿದ್ದಾನೆ ಎಂದು ಗುಣುಗುಟ್ಟಿದರು.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಅದನ್ನು ಕಂಡು ಫರಿಸಾಯರೂ ಅವರಲ್ಲಿದ್ದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗುಣುಗುಟ್ಟುತ್ತಾ - ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟ ಮಾಡುವದೇಕೆ ಎಂದು ಕೇಳಿದರು.


ಮನುಷ್ಯಕುಮಾರನು ಬಂದಿದ್ದಾನೆ, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ನೀವು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತೀರಿ.


ಯಾಕಂದರೆ ಯಾಕೋಬನ ಕಡೆಯಿಂದ ಕೆಲವರು ಬರುವದಕ್ಕೆ ಮುಂಚೆ ಅವನು ಅನ್ಯಜನರ ಸಂಗಡ ಊಟಮಾಡುತ್ತಿದ್ದನು; ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.


ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ ಜ್ಞಾನವೇ ಎಂದು ಗೊತ್ತಾಗುವದು ಅಂದನು.


ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು