Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:28 - ಕನ್ನಡ ಸತ್ಯವೇದವು J.V. (BSI)

28 ಇದನ್ನು ಕೇಳಿ ಅವನಿಗೆ ಸಿಟ್ಟುಬಂದು ಒಳಕ್ಕೆ ಹೋಗಲೊಲ್ಲದೆ ಇದ್ದನು. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಆಗ ಹಿರಿಯ ಮಗನು ಕೋಪಗೊಂಡು ಔತಣಕೂಟಕ್ಕೆ ಹೋಗಲಿಲ್ಲ. ಆಗ ಅವನ ತಂದೆ ಹೊರಗೆ ಬಂದು ಅವನನ್ನು ಒಳಗೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಅದಕ್ಕೆ ಹಿರಿಯ ಮಗನು ಕೋಪಗೊಂಡು ಒಳಗೆ ಹೋಗಲು ಇಷ್ಟಪಡಲಿಲ್ಲ. ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ಥೊರ್‍ಲ್ಯಾ ಭಾವಾಕ್, ಲೈ ರಾಗ್ ಯೆಲೊ, ರಾಗಾನ್ ತೊ, ಘರಾತ್ ಭುತ್ತುರ್ ಜಾವ್ಕುಚ್‍ನಾ. ತೆಚೆಸಾಟ್ನಿ, ತೆಚೊ ಬಾಬಾಚ್‍ ಘರಾತ್ನಾ ಭಾಯ್ರ್ ಯೆಲೊ, ಅನಿ ತೆಕಾ ಘರಾತ್ ಭುತ್ತುರ್ ಬಲ್ವುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:28
25 ತಿಳಿವುಗಳ ಹೋಲಿಕೆ  

ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.


ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹುವ್ಯಸನವೂ ಕೋಪವೂ ಉಂಟಾಗಿ ಅವನು - ದಾವೀದನು ಹತ್ತು ಸಾವಿರ ಗಟ್ಟಳೆಯಾಗಿ ಕೊಂದನೆಂದೂ ನಾನು ಸಾವಿರಗಟ್ಟಳೆಯಾಗಿ ಕೊಂದೆನೆಂದೂ ಹಾಡುತ್ತಾರಲ್ಲಾ! ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾದ ಹಾಗಾಯಿತು ಅಂದುಕೊಂಡು


ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಅದನ್ನು ಕಂಡು ಫರಿಸಾಯರೂ ಅವರಲ್ಲಿದ್ದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗುಣುಗುಟ್ಟುತ್ತಾ - ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟ ಮಾಡುವದೇಕೆ ಎಂದು ಕೇಳಿದರು.


ಅದನ್ನು ತೆಗೆದುಕೊಂಡು ಮನೆಯ ಯಜಮಾನನ ಮೇಲೆ ಗುಣುಗುಟ್ಟಿ -


ದಾವೀದನು ಜನರ ಸಂಗಡ ಹೀಗೆ ಮಾತಾಡುತ್ತಿರುವದನ್ನು ಅವನ ಹಿರೀ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು - ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿ? ನಿನ್ನ ಸೊಕ್ಕೂ ತುಂಟತನವೂ ನನಗೆ ಗೊತ್ತದೆ; ನೀನು ಯುದ್ಧವನ್ನು ನೋಡುವದಕ್ಕೆ ಬಂದಿದ್ದೀ ಎಂದು ಅವನನ್ನು ಗದರಿಸಲು


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಆದರೆ ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳುಕೊಳ್ಳಲಿಲ್ಲವೇನು ಎಂದು ಕೇಳುತ್ತೇನೆ. ಈ ವಿಷಯದಲ್ಲಿ - ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡುಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.


ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು - ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಳ್ಳಲು ಆತನು ಕನಿಕರಪಟ್ಟು ಕೈನೀಡಿ ಅವನನ್ನು ಮುಟ್ಟಿ -


ಆಳು ಅವನಿಗೆ - ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತವಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ ಎಂದು ಹೇಳಿದನು.


ಆದರೆ ಅವನು ತನ್ನ ತಂದೆಗೆ - ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.


ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು