Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:29 - ಕನ್ನಡ ಸತ್ಯವೇದವು J.V. (BSI)

29 ಆದರೆ ಅವನು ತನ್ನ ತಂದೆಗೆ - ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಅವನು ಉತ್ತರವಾಗಿ ತನ್ನ ತಂದೆಗೆ, ‘ಎಷ್ಟೋ ವರ್ಷಗಳಿಂದ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ. ನಾನು ನಿನ್ನ ಒಂದು ಅಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರೊಂದಿಗೆ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಮೇಕೆಯ ಮರಿಯನ್ನಾದರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ತೆನಿ ಅಪ್ನಾಚ್ಯಾ ಬಾಬಾಕ್, “ಬಾಬಾ, ಎವ್ಡಿ ಸಗ್ಳಿ ವರ್ಸಾ, ಎಕ್ ಆಳಾಚ್ಯಾ ಸರ್ಕೆ, ಮಿಯಾ ತುಜ್ಯಾಸಾಟಿ ಕಾಮ್ ಕರ್‍ಲೊ, ಅನಿ ಕನ್ನಾಚ್ ಮಿಯಾ ತುಜಿ ಗೊಸ್ಟ್ ಮೊಡುಕ್‍ ನಾ. ತರ್, ತಿಯಾ ಮಾಕಾ ಕಾಯ್ ದಿಲೆ? ದೊಸ್ತಾಂಚ್ಯಾ ವಾಂಗ್ಡಾ ಮಜ್ಯಾ ಕರ್ ಮನುನ್. ಎಕ್ ಶೆಳ್ ಸೈತ್ ತಿಯಾ ಮಾಕಾ ದಿವ್ಕ್‌ನೆಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:29
23 ತಿಳಿವುಗಳ ಹೋಲಿಕೆ  

ನೀನು ನಿನ್ನ ವಿಷಯದಲ್ಲಿ - ನಾನು ಐಶ್ವರ್ಯವಂತನು, ಸಂಪನ್ನನು, ಒಂದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬಟ್ಟೆಯಿಲ್ಲದವನು ಆಗಿರುವದನ್ನು ತಿಳಿಯದೆ ಇದ್ದೀ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.


ನೀನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು ಅಂದನು.


ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.


ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ ಎಂದು ಹೇಳಿದನು.


ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.


ಕಡೆಗೆ ಬಂದ ಇವರು ಒಂದು ತಾಸು ಹೊತ್ತು ಮಾತ್ರ ಕೆಲಸ ಮಾಡಿದ್ದಾರೆ; ನಾವು ದಿನವೆಲ್ಲಾ ಬಿಸಲಿನಲ್ಲಿ ಕೆಲಸ ಮಾಡಿ ಕಷ್ಟಪಟ್ಟಿದ್ದೇವೆ; ಇವರನ್ನು ನಮಗೆ ಸಮಮಾಡಿದ್ದೀಯೆ ಅಂದರು.


ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;


ಆಗ - ನಾವು ಬಹು ವರುಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಲ್ಲಿ ಉಪವಾಸಮಾಡಿ ಅಳಬೇಕೋ ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ ಎಂಬದಾಗಿ ಅವರಿಗೆ ಅಪ್ಪಣೆಕೊಟ್ಟಿದ್ದರು.


ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.


ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರುಹು ಉಂಟಾಗುತ್ತದಷ್ಟೆ.


ಇದನ್ನು ಕೇಳಿ ಅವನಿಗೆ ಸಿಟ್ಟುಬಂದು ಒಳಕ್ಕೆ ಹೋಗಲೊಲ್ಲದೆ ಇದ್ದನು. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.


ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು