Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:30 - ಕನ್ನಡ ಸತ್ಯವೇದವು J.V. (BSI)

30 ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ನಿನ್ನ ಕಿರಿಯ ಮಗನು ನಿನ್ನ ಎಲ್ಲ ಹಣವನ್ನು ಸೂಳೆಯರಿಗೆ ಖರ್ಚುಮಾಡಿ ಮನೆಗೆ ಹಿಂತಿರುಗಿ ಬಂದಾಗ ನೀನು ಅವನಿಗಾಗಿ ಕೊಬ್ಬಿದ ಕರುವನ್ನು ಕೊಯ್ಸಿದ್ದಿ!’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ, ಹ್ಯಾ ತುಜ್ಯಾ ಲೆಕಾನ್ ತುಜಿ ಸಗ್ಳಿ ಆಸ್ತಿ ಅನಿ ಪೈಸೆ ರಾಂಡಾ ಕರುನ್ ಹಾಳ್ ಕರ್‍ಲ್ಯಾನ್, ಅನಿ ತೊ ಪರ್ತುನ್ ಯೆಲಾ ಮನುನ್ ತಿಯಾ ಬರೊ ತಯಾರ್‍ಲೊ ಪುಟ್ಪುಟಿತ್ ಪಾಡ್ಕು ಮಾರ್ಲೆಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:30
10 ತಿಳಿವುಗಳ ಹೋಲಿಕೆ  

ಜ್ಞಾನಾಸಕ್ತನು ತಂದೆಯನ್ನು ಹರ್ಷಗೊಳಿಸುವನು; ವೇಶ್ಯಾಸಂಗಿಯು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು - ಯೆಹೋವನೇ, ನೀನು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ಐಗುಪ್ತದೇಶದಿಂದ ಬಿಡಿಸಿದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವದೇಕೆ?


ಹೀಗಿರಲಾಗಿ ಯೆಹೋವನು ಮೋಶೆಗೆ - ನೀನು ಬೆಟ್ಟದಿಂದ ಇಳಿದುಹೋಗು; ಐಗುಪ್ತದೇಶದಿಂದ ನೀನು ಕರಕೊಂಡು ಬಂದ ನಿನ್ನ ಜನರು ಕೆಟ್ಟು ಹೋದರು.


ಹೇಗೆಂದರೆ ಎಲ್ಲರು ತಮಗೆ ಸಾಕಾಗಿ ವಿುಕ್ಕದ್ದರಲ್ಲಿ ಹಾಕಿದರು; ಈಕೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಹಾಕಿದಳು, ತನ್ನ ಜೀವನವನ್ನೇ ಕೊಟ್ಟುಬಿಟ್ಟಳು ಅಂದನು.


ಆದರೆ ಅವನು ತನ್ನ ತಂದೆಗೆ - ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.


ಅದಕ್ಕೆ ತಂದೆಯು - ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ಮತ್ತು ನನ್ನದೆಲ್ಲಾ ನಿನ್ನದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು