Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:7 - ಕನ್ನಡ ಸತ್ಯವೇದವು J.V. (BSI)

7 ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ನ್ಹವದಾರ್ ನ್ಹವ್ ಧರ್ಮಾನಿ ಚಲ್ತಲ್ಯಾ, ಅನಿ ಮನ್ ಬದ್ಲುಕ್ ತಯಾರ್ ನಸಲ್ಲ್ಯಾ ಲೊಕಾಂಚ್ಯಾನ್ಕಿ, ಮನ್ ಬದ್ಲುನ್ ಬರೊ ಹೊಲ್ಲ್ಯಾ ಎಕ್ ಪಾಪಿ ಮಾನ್ಸಾಸಾಟ್ನಿ ಸರ್‍ಗಾತ್ ಲೈ ಕುಶಿ ಹೊತಾ, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:7
13 ತಿಳಿವುಗಳ ಹೋಲಿಕೆ  

ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯುವದಕ್ಕೆ ನಾನು ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಎಂದು ಅವರಿಗೆ ಉತ್ತರಕೊಟ್ಟನು.


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು ಎಣಿಸಿಕೊಳ್ಳುವ ಬೇರೊಂದು ತರದವರುಂಟು.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಆದರೆ ಅವನು ತನ್ನ ತಂದೆಗೆ - ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲದಿಂದ ತೋರಿಸಿರಿ.


ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಅವರಿಗೆ ಹೇಳುವನಲ್ಲವೇ.


ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದುಹೋದರೆ ದೀಪಾಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು