Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:1 - ಕನ್ನಡ ಸತ್ಯವೇದವು J.V. (BSI)

1 ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಇವನ ವಿಷಯವಾಗಿ ಯಜಮಾನನ ಬಳಿಯಲ್ಲಿ - ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ತನ್ನ ಶಿಷ್ಯರಿಗೆ ಹೀಗೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದು: “ಒಬ್ಬ ಐಶ್ವರ್ಯವಂತನಿದ್ದನು, ಅವನಿಗಿದ್ದ ಒಬ್ಬ ನಿರ್ವಾಹಕನು ಅವನ ಸರಕುಗಳನ್ನು ಹಾಳು ಮಾಡುತ್ತಿದ್ದಾನೆಂದು ಅವನಿಗೆ ಯಾರೋ ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಎಗ್ದಾ ಎಕ್ ಸಾವ್ಕಾರ್ ಮಾನುಸ್ ಹೊತ್ತೊ. ತೆಚೊ ಯಾವಾರ್ ಸಂಬಾಳ್ತಲೊ ಎಕ್ ಕಾರ್ಬಾರಿ ಹೊತ್ತೊ. ಸಾವ್ಕಾರಾಕ್, ತೊ ಕಾರ್ಬಾರಿ ಅಪ್ನಾಚೆ ಪಯ್ಸೆ ಹಾಳ್ ಕರುಕ್ ಲಾಗ್ಲಾ ಮನುನ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:1
19 ತಿಳಿವುಗಳ ಹೋಲಿಕೆ  

ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು?


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.


ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.


ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು.


ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ಮೊಹರಿ.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಆತನಿಗೆ ಕೊಟ್ಟು ಉಪಚಾರಮಾಡುತ್ತಿದ್ದರು.


ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ದಾವೀದನು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳನ್ನು ಅಂದರೆ ಕುಲಾಧಿಪತಿಗಳು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಅಂತೂ ಎಲ್ಲಾ ಘನವಂತರನ್ನು ಯೆರೂಸಲೇವಿುಗೆ ಕರಿಸಿದನು.


ಮನೇಬಾಗಲಲ್ಲಿದ್ದ ಮನೆವಾರ್ತೆಯವನ ಬಳಿಗೆ ಹೋಗಿ ಅವನಿಗೆ -


ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.


ಸಂಜೇಹೊತ್ತಿಗೆ ದ್ರಾಕ್ಷೇತೋಟದ ಯಜಮಾನನು ತನ್ನ ಪಾರುಪತ್ಯಗಾರನಿಗೆ - ಆ ಆಳುಗಳನ್ನು ಕರೆದು ಕಡೆಗೆ ಬಂದವರನ್ನು ಮೊದಲು ಮಾಡಿಕೊಂಡು ಮೊದಲು ಬಂದವರ ತನಕ ಅವರಿಗೆ ಕೂಲಿಕೊಡು ಎಂದು ಹೇಳಿದನು.


ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು