Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:10 - ಕನ್ನಡ ಸತ್ಯವೇದವು J.V. (BSI)

10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು; ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾದವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿರುವವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿರುವನು. ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಸ್ವಲ್ಪವಾದದ್ದರಲ್ಲಿ ನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ನಂಬಿಗಸ್ತರಾಗಿರುವರು ಮತ್ತು ಸ್ವಲ್ಪವಾದದ್ದರಲ್ಲಿ ಅಪನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ಅಪನಂಬಿಗಸ್ತರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನ್ ಬಾರಿಕ್ಲ್ಯಾ ವಿಶಯಾತ್ನಿ ವಿಶ್ವಾಸಾನ್ ರ್‍ಹಾತಾ; ತೊ ಮೊಟ್ಯಾ ವಿಶಯಾತ್ನಿಬಿ ವಿಶ್ವಾಸಾನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:10
9 ತಿಳಿವುಗಳ ಹೋಲಿಕೆ  

ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.


ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.


ಅವನ ಧಣಿಯು ಅವನಿಗೆ - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಎಂದು ಹೇಳಿದನು.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸುವೂ ತನ್ನನ್ನು ನೇವಿುಸಿದಾತನಿಗೆ ನಂಬಿಗಸ್ತನಾಗಿದ್ದಾನೆ.


ಅವನು ಬಡವರಿಗೋಸ್ಕರ ಚಿಂತಿಸಿ ಇದನ್ನು ಹೇಳಲಿಲ್ಲ; ಅವನು ಕಳ್ಳನಾಗಿದ್ದು ತನ್ನ ವಶದಲ್ಲಿದ್ದ ಅವರ ಹಣದ ಚೀಲದಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದದರಿಂದಲೇ ಹೇಳಿದನು.


ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ - ನೀನು ಮಾಡುವದನ್ನು ಬೇಗನೆ ಮಾಡಿಬಿಡು ಎಂದು ಹೇಳಿದನು.


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು