Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:15 - ಕನ್ನಡ ಸತ್ಯವೇದವು J.V. (BSI)

15 ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜುನ್ ತೆಂಕಾ “ಲೊಕಾಂಚ್ಯಾ ಡೊಳ್ಯಾಕ್ನಿ ತುಮಿ ತುಮ್ಕಾಚ್ ಬರಿ ಮಾನ್ಸಾ ಮನುನ್ ದಾಕ್ವುನ್ ದಿತ್ಯಾಶಿ, ಖರೆ, ದೆವಾಕ್ ತುಮ್ಚೊ ಮನ್ ಕಸೊ ಹಾಯ್ ಮನ್ತಲೆ ಗೊತ್ತ್ ಹಾಯ್, ಮಾನ್ಸಾನಿ ಲೈ ಮೊಟ್ಯಾ ಕಿಮ್ತಿಚೆ ಮನುನ್ ಯವಜಲ್ಲ್ಯಾಚಿ ಕಿಮ್ಮತ್ ದೆವಾಚ್ಯಾ ನದ್ರೆತ್ ಕಾಯ್ಬಿ ನ್ಹಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:15
40 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ; ಅವರಿಗೆ ದಂಡನೆ ಖಂಡಿತ.


ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು.


ಜಡೆಹೆಣೆದುಕೊಳ್ಳುವದು ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದು ವಸ್ತ್ರಗಳನ್ನು ಧರಿಸಿಕೊಳ್ಳುವದು ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ಸ್ವಾವಿುಯು ಅವನಿಗೆ - ಫರಿಸಾಯರಾದ ನೀವು ಪಂಚಪಾತ್ರೆ ಬಟ್ಟಲು ಇವುಗಳ ಹೊರ ಭಾಗವನ್ನು ಶುಚಿಮಾಡುತ್ತೀರಿ ಸರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರುಹು ಉಂಟಾಗುತ್ತದಷ್ಟೆ.


ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರಿಗೆ ಕಾಣಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕ ಪಟ್ಟಿಗಳನ್ನು ಅಗಲಮಾಡುತ್ತಾರೆ, ಗೊಂಡೆಗಳನ್ನು ಉದ್ದಮಾಡುತ್ತಾರೆ.


ಅದಕ್ಕವನು - ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪ ಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.


(ಈ ಮನುಷ್ಯನು ತನ್ನ ದ್ರೋಹದಿಂದ ಸಂಪಾದಿಸಿದ ಹಣಕ್ಕೆ ಒಂದು ಹೊಲವನ್ನು ಕೊಂಡುಕೊಂಡನು; ಮತ್ತು ತಲೆಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಸುರಿದವು.


ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.


ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು.


ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ಸಿರಿ ಬಂದಾಗ ಹೆರರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ ಜನಸ್ತುತಿಯಿಂದಲೂ ಕೂಡಿದವನಾದರೂ


ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. ಸೆಲಾ.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.


ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು.


ಆದರೆ ಹೃದಯಗಳನ್ನು ಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು