Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:29 - ಕನ್ನಡ ಸತ್ಯವೇದವು J.V. (BSI)

29 ಆದರೆ ಅಬ್ರಹಾಮನು - ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳು ಅವರಲ್ಲಿ ಇವೆ. ಅವರು ಅವುಗಳನ್ನು ಓದಿ ಕಲಿತುಕೊಳ್ಳಲಿ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಅಬ್ರಾಹಾಮಾನ್,“ತುಜ್ಯಾ ಭಾವಾಕ್ನಿ ಉಶಾರ್ಕಿ ದಿವ್ಕ್ ಮೊಯ್ಜೆ, ಅನಿ ಪ್ರವಾದ್ಯಾಂಚಿ ಪುಸ್ತಕಾ ಹಾತ್. ತ್ಯಾತುರ್‍ನಿ ಸಾಂಗಟಲ್ಲೆಚ್ ತುಜಿ ಭಾವಾ ಆಯ್ಕುಂದಿತ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:29
13 ತಿಳಿವುಗಳ ಹೋಲಿಕೆ  

ಯಾಕಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್‍ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.


ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಯಾವದೂ ಇಲ್ಲದಿರದು, ಎಲ್ಲವೂ ಜೊತೆಜೊತೆಯಾಗಿರುವವು; ಆತನ ಬಾಯಿಂದ ಅಪ್ಪಣೆಯಾಯಿತಲ್ಲವೆ, ಆತನ ಆತ್ಮವು ಇವುಗಳನ್ನು ಒಟ್ಟಿಗೆ ಬರಮಾಡಿತಷ್ಟೆ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಆಗ ಯೆಶಾಯನೆಂಬ ಪ್ರವಾದಿಯ ಗ್ರಂಥದ ಸುರಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರಳಿಯನ್ನು ಬಿಚ್ಚಿ ಮುಂದೆ ಹೇಳುವ ಮಾತು ಬರೆದಿರುವ ಸ್ಥಳವನ್ನು ಕಂಡು ಓದಿದನು; ಆ ಮಾತೇನಂದರೆ -


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು