Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:3 - ಕನ್ನಡ ಸತ್ಯವೇದವು J.V. (BSI)

3 ಹೀಗಿರಲಾಗಿ ಆ ಮನೆವಾರ್ತೆಯವನು - ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷಾ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆಗ, ಆ ಮೇಲ್ವಿಚಾರಕನು ತನ್ನೊಳಗೆ, ‘ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಈ ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಆಗ ಆ ನಿರ್ವಾಹಕನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ. ಅಗೆಯಲು ನನಗೆ ಶಕ್ತಿಯಿಲ್ಲ, ಭಿಕ್ಷೆ ಬೇಡಲು ನನಗೆ ನಾಚಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ತ್ಯಾ ಕಾರ್‍ಬಾರ್‍ಯಾನ್ ಅಪ್ನಾಚ್ಯಾ ಮನಾತುಚ್ “ಅತ್ತಾ ಜಾಲ್ಯಾರ್, ಮಾಜೊ ಧನಿ ಮಾಕಾ ಮಾಜ್ಯಾ ಕಾಮಾ ವೈನಾ ಕಾಡ್ನಾರ್ ಹಾಯ್,ಮಿಯಾ ಅತ್ತಾ ಕಾಯ್ ಕರು? ಖಂಡುಕ್ ಮಾಕಾ ಬಳ್ ನಾ, ಅನಿ ಭಿಕ್ ಮಾಗುಕ್ ಮಾಕಾ ಲಜ್ಜಾ ಕರ್‍ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:3
26 ತಿಳಿವುಗಳ ಹೋಲಿಕೆ  

ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆ ಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ವರ್ತಮಾನ ಕೇಳಿದ್ದೇವೆ.


ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.


ಆಗ ನೆರೆಹೊರೆಯವರೂ ಅವನು ಭಿಕ್ಷಗಾರನಾಗಿದ್ದದ್ದನ್ನು ಮೊದಲು ನೋಡಿದವರೂ - ಇವನು ಕೂತಿದ್ದ ಆ ಭಿಕ್ಷುಕನಲ್ಲವೇ ಅಂದರು.


ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ;


ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.


ಅವನ ಮನೇ ಬಾಗಿಲಲ್ಲಿ ಲಾಜರನೆಂಬ ಒಬ್ಬ ಭಿಕ್ಷಗಾರನು ಬಿದ್ದುಕೊಂಡಿದ್ದನು.


ಆಗ ಅವನು ತನ್ನೊಳಗೆ - ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ - ಒಂದು ಕೆಲಸ ಮಾಡುತ್ತೇನೆ;


ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು.


ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿವಸದಲ್ಲಿ ಏನು ಮಾಡುವಿರಿ?


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಆಳನ್ನು ಚಿಕ್ಕತನದಿಂದ ಕೋಮಲವಾಗಿ ಸಾಕಿದರೆ ತರುವಾಯು ಅವನು ಎದುರುಬೀಳುವನು.


ಮೈಗಳ್ಳನು ಮಳೆಗಾಲದಲ್ಲಿ ಹೊಲಗೇಯನು; ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ.


ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಹಾಮಾನನು ಬಂದಾಗ - ಅರಸನು ಯಾವನನ್ನು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿರುತ್ತಾನೋ ಅಂಥವನಿಗೆ ಮಾಡತಕ್ಕದ್ದೇನು ಎಂದು ಅವನನ್ನು ಕೇಳಿದನು. ಹಾಮಾನನು - ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವದಕ್ಕೆ ಇಷ್ಟವುಳ್ಳವನಾಗಿರುವನು ಅಂದುಕೊಂಡು


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.


ಸಂಜೇಹೊತ್ತಿಗೆ ದ್ರಾಕ್ಷೇತೋಟದ ಯಜಮಾನನು ತನ್ನ ಪಾರುಪತ್ಯಗಾರನಿಗೆ - ಆ ಆಳುಗಳನ್ನು ಕರೆದು ಕಡೆಗೆ ಬಂದವರನ್ನು ಮೊದಲು ಮಾಡಿಕೊಂಡು ಮೊದಲು ಬಂದವರ ತನಕ ಅವರಿಗೆ ಕೂಲಿಕೊಡು ಎಂದು ಹೇಳಿದನು.


ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು.


ಈ ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ ಅಂದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು