Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:30 - ಕನ್ನಡ ಸತ್ಯವೇದವು J.V. (BSI)

30 ಅವನು - ತಂದೆಯೇ, ಅಬ್ರಹಾಮನೇ, ಹಾಗಲ್ಲ; ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಅದಕ್ಕೆ ಐಶ್ವರ್ಯವಂತನು, ‘ತಂದೆಯಾದ ಅಬ್ರಹಾಮನೇ, ಹಾಗೆನ್ನಬೇಡ! ಯಾರಾದರೊಬ್ಬರು ಸತ್ತವರೊಳಗಿಂದ ಎದ್ದುಹೋದರೆ, ಅವರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳುವರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆಗ ಅವನು, ‘ಹಾಗಲ್ಲ, ತಂದೆ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಜೀವಂತವಾಗಿ ಅವರ ಬಳಿಗೆ ಹೋದರೆ, ಅವರು ಪಶ್ಚಾತ್ತಾಪ ಪಡುವರು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತ್ಯಾ ಸಾವ್ಕಾರ್ ಮಾನ್ಸಾನ್, “ತೆ ತವ್ಡೆಚ್ ತೆಂಕಾ ಉಶಾರ್ಕಿ ದಿವ್ಕ್ ಪಾವಿನಾ, ಅಬ್ರಾಹಾಮ್ ಬಾಬಾ! ಮರಲ್ಲೊ ಎಕ್ಲೊ ಝಿತ್ತೊ ಹೊವ್ನ್ ತೆಂಚ್ಯಾಕ್ಡೆ ಗೆಲ್ಯಾರ್, ತೆನಿ ತೆಂಚ್ಯಾ ಪಾಪಾನಿತ್ನಾ ಫಾಟಿ ಪರತ್ತ್ಯಾತ್”, ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:30
7 ತಿಳಿವುಗಳ ಹೋಲಿಕೆ  

ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.


ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು.


ಇದನ್ನು ಕೇಳಿ ಯೇಸು - ಈಹೊತ್ತು ಈ ಮನೆಗೆ ರಕ್ಷಣೆಯಾಯಿತು; ಇವನು ಸಹ ಅಬ್ರಹಾಮನ ವಂಶಿಕನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು