Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:31 - ಕನ್ನಡ ಸತ್ಯವೇದವು J.V. (BSI)

31 ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ಅಬ್ರಾಮಾನ್,“ಮೊಯ್ಜೆನ್, ಅನಿ ಪ್ರವಾದ್ಯಾನಿ ಸಾಂಗಟಲ್ಲೆ ತೆನಿ ಆಯ್ಕಿ ನಸ್ಲ್ಯಾರ್, ಮರಲ್ಲ್ಯಾತ್ಲೊ ಕೊನ್ಬಿ ಝಿತ್ತೊ ಹೊವ್ನ್ ಗೆಲ್ಯಾರ್‍ಬಿ, ತೆನಿ ಆಯ್ಕಿನ್ಯಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:31
11 ತಿಳಿವುಗಳ ಹೋಲಿಕೆ  

ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವದಾದರೆ ನಾಶನಮಾರ್ಗದಲ್ಲಿರುವವರಿಗೇ ಮರೆಯಾಗಿರುವದು.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಅವರು ಅವನಿಗೆ ಒಂದು ದಿವಸವನ್ನು ಗೊತ್ತುಮಾಡಲು ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗಿನಿಂದ ಸಾಯಂಕಾಲದವರೆಗೂ ದೇವರ ರಾಜ್ಯವನ್ನು ಕುರಿತು ಪ್ರಮಾಣವಾಗಿ ಸಾಕ್ಷಿಹೇಳುತ್ತಾ ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಅದಕ್ಕೆ ಅಗ್ರಿಪ್ಪನು - ಅಲ್ಪಪ್ರಯತ್ನದಿಂದ ನನ್ನನ್ನು ಕ್ರೈಸ್ತನಾಗುವದಕ್ಕೆ ಒಡಂಬಡಿಸುತ್ತೀಯಾ? ಎಂದು ಹೇಳಲು


ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು.


ಯೆಫೆತನನ್ನು ದೇವರು ವಿಸ್ತರಿಸಲಿ. ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ. ಕಾನಾನನು ಅವರಿಗೆ ದಾಸನಾಗಿರಲಿ ಎಂಬದು.


ಅವನು - ತಂದೆಯೇ, ಅಬ್ರಹಾಮನೇ, ಹಾಗಲ್ಲ; ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು.


ಆತನು ತನ್ನ ಶಿಷ್ಯರಿಗೆ - ತೊಡಕುಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?


ಅವನು ಬರೆದ ಮಾತುಗಳನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬೀರಿ? ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು