Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:9 - ಕನ್ನಡ ಸತ್ಯವೇದವು J.V. (BSI)

9 ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತವಾದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ಫಿಡೆ ಜೆಜುನ್ “ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ; ಜಗಾತ್ ತುಮಿ ತುಮ್ಚ್ಯಾಚ್ ಸಾಟ್ನಿ ಮನುನ್, ತುಮ್ಚ್ಯಾ ಅನ್ನ್ಯಾಯಾಚ್ಯಾ ಸಾವ್ಕಾರ್‍ಕಿನ್ ದೊಸ್ತಿಯಾ ಕಮ್ವುನ್ ಘೆವಾ, ಅಶೆ ಹ್ಯಾ ಜಗಾನ್ ತುಮ್ಕಾ ಸೊಡುನ್ ದಿಲ್ಲ್ಯಾ ತನ್ನಾ ತುಮ್ಕಾ ಕನ್ನಾಚ್ ಮರಾನ್ ನಸ್ತಾನಾ ರ್‍ಹಾತಲ್ಯಾ ಘರಾತ್ ಬಲ್ವುನ್ ಘೆವ್ನ್ ಹೊತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:9
28 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನು ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು?


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.


ನಿಮಗಿರುವದನ್ನು ಮಾರಿಬಿಟ್ಟು ದಾನಾ ಕೊಡಿರಿ; ಹಳೇವಾಗದಂಥ ಹಮ್ಮೀಣಿಗಳನ್ನು ಮಾಡಿಕೊಂಡು ಪರಲೋಕದಲ್ಲಿ ಲಯವಾಗದ ದ್ರವ್ಯವನ್ನು ಇಟ್ಟುಕೊಳ್ಳಿರಿ. ಅಲ್ಲಿ ಕಳ್ಳನು ಸಮೀಪಕ್ಕೆ ಬರುವದಿಲ್ಲ; ಅದು ನುಸಿಹಿಡಿದು ನಾಶವಾಗುವದಿಲ್ಲ.


ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು.


ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಿಬಂತು, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.


ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.


ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹು ದಿನದ ಮೇಲೆ ಅದು ನಿನಗೆ ಸಿಕ್ಕುವದು.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.


ಈ ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ ಅಂದುಕೊಂಡು


ಜ್ಞಾನಿಗಳ [ಜ್ಞಾನ] ಕೀರಿಟವೇ ಅವರ ಶ್ರೇಷ್ಠ ಸಂಪತ್ತು; ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು