Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:14 - ಕನ್ನಡ ಸತ್ಯವೇದವು J.V. (BSI)

14 ಆತನು ಅವರನ್ನು ನೋಡಿ - ನೀವು ಹೋಗಿ ಯಾಜಕರಿಗೆ ಮೈ ತೋರಿಸಿಕೊಳ್ಳಿರಿ ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸು ಅವರನ್ನು ನೋಡಿ, “ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ,” ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಅವರನ್ನು ನೋಡಿ, “ಹೋಗಿ, ನಿಮ್ಮನ್ನು ಯಾಜಕರಿಗೆ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಯಾಜಕರ ಬಳಿಗೆ ಹೋಗುತ್ತಿದ್ದಾಗ ಅವರಿಗೆ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಅವರನ್ನು ನೋಡಿ, “ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ,” ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜುನ್ ತೆಂಕಾ ಬಗಟ್ಲ್ಯಾನ್, ಅನಿ “ಜಾವಾ, ಯಾಜಕಾನಿಕ್ಡೆ ಜಾವ್ನ್ ತಪಾಸುನ್ ಬಗುನ್ ಘೆವಾ” ಮಟ್ಲ್ಯಾನ್. ವಾಟೆನ್ ಜಾತಾ-ಜಾತಾನಾಚ್ ತೆನಿ ಪವಿತ್ರ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:14
11 ತಿಳಿವುಗಳ ಹೋಲಿಕೆ  

ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.


ಅವನು ಯೊರ್ದನಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಣುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.


ರಾತ್ರಿಯಲ್ಲಿ ತಿರುಗಾಡಿದರೆ ಅವನಿಗೆ ಬೆಳಕಿಲ್ಲದ್ದರಿಂದ ಎಡವುವನು ಎಂದು ಉತ್ತರಕೊಟ್ಟನು.


ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.


ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು