Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:2 - ಕನ್ನಡ ಸತ್ಯವೇದವು J.V. (BSI)

2 ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ತೊಡಕನ್ನೊಡ್ಡುವದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಂಥವರು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ನಡೆಸುವುದಕ್ಕಿಂತ ಅವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದೊಳಗೆ ಬಿಸಾಡುವುದು ಉತ್ತಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಎಕ್ಲ್ಯಾನ್ ಪಾಪಾತ್ ಪಡುಕ್ ಕಾರನ್ ಹೊತಲ್ಯಾ ಬದ್ಲಾಕ್ ತೆಕಾ ತೆಚ್ಯಾ ಗಳ್ಯಾತ್ ಎಕ್ ಮೊಟೊ ಜಾತ್ಯಾಚೊ ಗುಂಡೊ ಭಾಂದುನ್ ಸಮುಂದರಾತ್ ನ್ಹೆವ್ನ್ ತಾಕ್ತಲೆ ಲೈ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:2
13 ತಿಳಿವುಗಳ ಹೋಲಿಕೆ  

ಮತ್ತು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಸಮುದ್ರದಲ್ಲಿ ಹಾಕಿದರೂ ಅವನಿಗೆ ಲೇಸು.


ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಬಲವಿಲ್ಲದವರನ್ನು ಸಂಪಾದಿಸುವದಕ್ಕೆ ಅವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾಗಿದ್ದೇನೆ.


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ನಡಿಸಲಿಲ್ಲ; ನನ್ನ ವಿಷಯದಲ್ಲಿಯೂ ಹೀಗಾಗಬೇಕೆಂದು ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಅದಕ್ಕಿಂತ ಸಾಯುವದೇ ನನಗೆ ಲೇಸು. ಹೊಗಳಿಕೊಳ್ಳುವದಕ್ಕೆ ನನಗಿರುವ ಈ ಆಸ್ಪದವನ್ನು ಯಾರೂ ತೆಗೆದುಬಿಡಬಾರದು.


ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು