Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:22 - ಕನ್ನಡ ಸತ್ಯವೇದವು J.V. (BSI)

22 ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಒಂದು ಕಾಲ ಬರುತ್ತದೆ, ಅದರಲ್ಲಿ ನೀವು ಮನುಷ್ಯಕುಮಾರನ ದಿವಸಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನ ದಿನಗಳಲ್ಲೊಂದನ್ನು ನೀವು ನೋಡಬೇಕೆಂದು ಬಹಳವಾಗಿ ಆಶಿಸುವ ಕಾಲವು ಬರುವುದು, ಆದರೆ ನೀವು ಅದನ್ನು ನೋಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿ ಒಂದನ್ನು ಕಾಣಬೇಕೆಂದು ನೀವು ಬಯಸುವ ಕಾಲ ಬರುತ್ತದೆ, ಆದರೂ ನೀವು ಅದನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ತೆನಿ ಶಿಸಾಕ್ನಿ, ಎಕ್ ಎಳ್ ಯೆತಾ, ಮಾನ್ಸಾಚೊ ಲೆಕ್ ಯೆತಲೆ ಹ್ಯಾ ದಿಸಾತ್ನಿ ಅಮಿ ಬಗ್ತಾಂವ್, ಮನುನ್ ತುಮಿ ಯವ್ಜುನ್ ಘೆವ್ನ್ ರ್‍ಹಾತ್ಯಾಶಿ, ಖರೆ, ತೊ ದಿಸ್ ತುಮ್ಕಾ ಬಗುಕ್ ಗಾವಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:22
11 ತಿಳಿವುಗಳ ಹೋಲಿಕೆ  

ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ. ಆ ಕಾಲದಲ್ಲೇ ಉಪವಾಸ ಮಾಡುವರು ಎಂದು ಉತ್ತರಕೊಟ್ಟನು.


ಯೇಸು ಅವರಿಗೆ - ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಟ್ಟಾರೋ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆಹಚ್ಚುವದಿಲ್ಲ;


ಪ್ರಿಯ ಮಕ್ಕಳೇ, ಇನ್ನು ಸ್ವಲ್ಪಕಾಲವೇ ನಿಮ್ಮ ಸಂಗಡ ಇರುತ್ತೇನೆ. ನನ್ನನ್ನು ಹುಡುಕುವಿರಿ, ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆ ಈಗ ನಿಮಗೂ ಹೇಳುತ್ತೇನೆ.


ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ; ಆ ಕಾಲದಲ್ಲೇ ಉಪವಾಸಮಾಡುವರು.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ನೋಡಿರಿ, ನಿಮ್ಮ ಆಲಯವು ನಿಮಗೆ ಬರೀದಾಗಿಬಿಟ್ಟದೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ ಎಂದು ನೀವು ಹೇಳುವ ತನಕ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು