ಲೂಕ 17:29 - ಕನ್ನಡ ಸತ್ಯವೇದವು J.V. (BSI)29 ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದರೆ ಲೋಟನು ಸೊದೋಮಿನಿಂದ ತೆರಳಿದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಮಾಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಖರೆ ಲೊಟ್ ಸೊದೊಮಾತ್ನಾ ಭಾಯ್ರ್ ಪಡಲ್ಲ್ಯಾ ತನ್ನಾ, ಮಳ್ಬಾ ವೈನಾ ಆಗ್ ಅನಿ ಆಗಿಚ್ಯಾ ಇಂಗ್ಳ್ಯಾಂಚೊ ಪಾವ್ಸ್ ಯೆಲೊ, ಅನಿ ತೆಂಕಾ ಸಗ್ಳ್ಯಾಕ್ನಿ ಜಿವಾನಿಚ್ ಮಾರುನ್ ಸೊಡ್ಲ್ಯಾನ್. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.